ಒಳಮೀಸಲಾತಿ ಜಾರಿಗೆ ವಿರೋಧಿಸಿ ಪ್ರತಿಭಟನೆ: ಮಾಜಿ ಸಿಎಂ ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ, ಲಾಠಿಚಾರ್ಜ್

ಶಿವಮೊಗ್ಗ,ಮಾರ್ಚ್,27,2023(www.justkannada.in): ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಶಿವಮೊಗ್ಗ ಜಿಲ್ಲೆ  ಶಿಕಾರಿಪುರ ಪಟ್ಟಣದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಿ ಪ್ರತಿಭಟನೆ ನಡೆಸಿದ್ದಾರೆ.

ಒಳಮೀಸಲಾತಿ ಜಾರಿಗೆ ವಿರೋಧಿಸಿ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದ್ದು ಈ ವೇಳೆ ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜು ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ ನೂಕಾಟ ಉಂಟಾಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಕಲ್ಲು ತೂರಿದ್ದಾರೆ.

ಘಟನೆಯಲ್ಲಿ ಕೆಲವು ಪೊಲೀಸ್​ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಲಾಗಿದೆ. ಶಿಕಾರಿಪುರ ತಾಲೂಕು ಕಚೇರಿ ಎದುರು ಪ್ರತಿಭಟನೆ ಮುಂದುವರೆದಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ರವಾನೆ ಮಾಡಲಾಗಿದೆ. ಶಿಕಾರಿಪುರ ಪಟ್ಟಣದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.

Key words: Opposition – internal –reservation- protest-shikaripur