ಮಣಿಪಾಲ್ ಆಸ್ಪತ್ರೆಯಿಂದ ವಿಪಕ್ಷ ನಾಯಕ ಸಿದ್ಧರಾಮಯ್ಯ ಡಿಸ್ಚಾರ್ಜ್.

ಬೆಂಗಳೂರು,ಜೂನ್,7,2021(www.justkannada.in):  ಅನಾರೋಗ್ಯ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ ಇಂದು ಡಿಸ್ಚಾರ್ಜ್ ಆಗಿದ್ದಾರೆ.jk

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾ ಸಿದ್ದರಾಮಯ್ಯ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಪಡೆದ ಬಳಿಕ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು.

Key words: Opposition leader- Siddaramaiah -discharged – Manipal hospital