Sunday, August 30, 2026

BDA Apartments

Home Front Page ವಿಪಕ್ಷ ನಾಯಕರ ಆಯ್ಕೆ ವಿಚಾರ: ಶಾಸಕರ ಅಭಿಪ್ರಾಯ ಪಡೆದು ನಿರ್ಧಾರ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ವಿಪಕ್ಷ ನಾಯಕರ ಆಯ್ಕೆ ವಿಚಾರ: ಶಾಸಕರ ಅಭಿಪ್ರಾಯ ಪಡೆದು ನಿರ್ಧಾರ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ನವೆಂಬರ್,17,2023(www.justkannada.in):  ವಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ಹಿನ್ನೆಲೆ ವೀಕ್ಷಕರು ಬೆಂಗಳೂರಿಗೆ ಬಂದಿದ್ದಾರೆ. ಶಾಸಕರ ಜೊತೆ ಸಭೆ ನಡೆಸಿ ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ಮಾಧ್ಯಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಲಿದೆ. ಶಾಸಕರ ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳಲು ಹೇಳಿದ್ದಾರೆ  ಶಾಸಕಾಂಗ ಪಕ್ಷದ ಸಭೆಗೆ ಒಂದಿಬ್ಬರೂ ಶಾಸಕರು ಬಾರದೆ ಇರಬಹುದು ಎಂದರು.

ಶಾಸಕ ಎಸ್ ಟಿ ಸೋಮಶೇಖರ್ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ,  ಎಸ್ ಟಿ ಸೋಮಶೇಖರ್ ಜೊತೆ ನಿನ್ನೆ ಮಾತನಾಡಿದ್ದೇನೆ. ವಿಶೇಷ ಕಾರಣಕ್ಕಾಗಿ ಸೋಮಶೇಖರ್ ದೆಹಲಿಗೆ ಹೋಗಿದ್ದಾರೆ. ಎಸ್ ಟಿ ಸೋಮಶೇಖರ್ ಸಕ್ರಿಯವಾಗಿ ನಮ್ಮ ಜತೆ ಇರುತ್ತಾರೆ  ಎಂದು ತಿಳಿಸಿದರು.

Key words: opposition leaders-Decision – opinion -MLAs- Former CM -BS Yeddyurappa.