ವಿಪಕ್ಷ ನಾಯಕರ ಆಯ್ಕೆ ವಿಚಾರ: ಸ್ಪಷ್ಟನೆ ನೀಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಜುಲೈ,3,2023(www.justkannada.in):  ಇಂದು ಅಥವಾ ನಾಳೆ ವಿಪಕ್ಷ ನಾಯಕರ ಆಯ್ಕೆಯಾಗಲಿದೆ. ನಾಳೆ ಎಲ್ಲವೂ ಸರಿಯಾಗುತ್ತೆ ಯಾವುದೇ ಗೊಂದಲ ಇಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು.

ವಿಧಾನಸಭೆ, ವಿಧಾನ ಪರಿಷತ್​ ವಿಪಕ್ಷ ನಾಯಕರ ಆಯ್ಕೆ  ಕುರಿತು ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಅಥವಾ ನಾಳೆ ವಿಪಕ್ಷ ನಾಯಕರ ಆಯ್ಕೆ ಆಗಲಿದೆ. ನನ್ನ ಪ್ರಕಾರ ವೀಕ್ಷಕರು ಈಗಾಗಲೇ ಬಂದಿದ್ದಾರೆ. ನಾಳೆಗೆ ಎಲ್ಲಾವೂ ಸರಿಯಾಗುತ್ತೆ, ಯಾವುದೇ ಗೊಂದಲ ಇಲ್ಲ. ರಾಜ್ಯಪಾಲರ ಭಾಷಣ ನೋಡಿಲ್ಲ, ನೋಡಿದ ಬಳಿಕ ಮಾತಾಡುತ್ತೇನೆ ಎಂದರು.

ಕೇಂದ್ರ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆಗೆ ಸುದೀರ್ಘ ಚರ್ಚೆ ಮಾಡಲಾಗಿದೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಅಮಿತ್ ಶಾ ತೀರ್ಮಾನ ಮಾಡುತ್ತಾರೆ. ನಾಳೆ ಎಲ್ಲವೂ ತೀರ್ಮಾನ ಆಗಲಿದೆ  ಎಂದು ಬಿಎಸ್ ವೈ ತಿಳಿಸಿದರು.

Key words: opposition- leaders-Former CM -BS Yeddyurappa- clarified.