ಮೇಕದಾಟು ಜಲಾಶಯ ನಿರ್ಮಾಣಕ್ಕೆ ವಿರೋಧ: ಮತ್ತೆ ಖ್ಯಾತೆ ತೆಗೆದ ತಮಿಳುನಾಡು ಸರ್ಕಾರ…

ನವದೆಹಲಿ,ಜೂ,25,2019(www.justkannada.in):  ರಾಜ್ಯ ಸರ್ಕಾರದ ಮೇಕೆದಾಟು ಜಲಾಶಯ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಮತ್ತೆ ಖ್ಯಾತೆ ತೆಗೆದಿದೆ.

ಇಂದು ನವದೆಹಲಿಯಲ್ಲಿ ನಡೆಯುತ್ತಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಜಲಾಶಯ ನಿರ್ಮಾಣ ಕುರಿತು ರಾಜ್ಯ ಸರ್ಕಾರ ಪ್ರಸ್ತಾಪಿಸಿತು. ಈ ವೇಳೆ  ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಜಲಾಶಯ ನಿರ್ಮಿಸಲು ಯಾವುದೇ ಕಾರಣಕ್ಕೂ ಅವಕಾಶ ಕೊಡಬೇಡಿ ಎಂದು ತಮಿಳುನಾಡು ಸರ್ಕಾರದ ಪ್ರತಿನಿಧಿಗಳು ಸಭೆಯಲ್ಲಿ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಕೈಗೊಂಡಿರುವ ಮೇಕೆದಾಟು ಯೋಜನೆಗೆ ಕೇಂದ್ ಜಲಸಂಪನ್ಮೂಲ ಇಲಾಖೆ ಅನುಮತಿ ನೀಡಿದೆ.ಆದರೆ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಮತ್ತೆ ಮತ್ತೆ ತಮಿಳುನಾಡು ತನ್ನ ಖ್ಯಾತೆ ತೆಗೆಯುತ್ತಿದೆ.

Key words: Opposition – Mekadatu- Reservoir -Construction – Tamil Nadu