Thursday, September 10, 2026

BDA Apartments

Home Front Page ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ: ಮುಂದುವರೆದ ವಿಪಕ್ಷಗಳ ಧರಣಿ

ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ: ಮುಂದುವರೆದ ವಿಪಕ್ಷಗಳ ಧರಣಿ

ನವದೆಹಲಿ,ಜುಲೈ,24,2026 (www.justkannada.in):  ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳ ಧರಣಿ ಮುಂದುವರೆದಿದೆ.

ಇಂದು ಲೋಕಸಭೆಯಲ್ಲಿ ವಿಪಕ್ಷಗಳು ಧರಣಿಗೆ ಮುಂದಾಗಿದ್ದು ಕಲಾಪವನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

ಈ ಮಧ್ಯೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಸಂಸತ್ ಭವದನದ  ಮಕರದ್ವಾರದಲ್ಲಿ ವಿಪಕ್ಷಗಳ ಸಂಸದ ಪ್ರತಿಭಟನೆ ಮುಂದುವರೆದಿದೆ.  ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದಿರುವ ಪ್ರತಿಭಟನಾನಿರತ ವಿಪಕ್ಷಗಳ ಸಂಸದರು ಪ್ರಧಾನಿ ಮೋದಿ ವಿರುದ್ದ ಘೋಷಣೆ ಕೂಗಿ ಆಕ್ರೊಶ ವ್ಯಕ್ತಪಡಿಸಿದ್ದಾರೆ. ಧರಣಿಯಲ್ಲಿ ಎಲ್ಲಾ ವಿಪಕ್ಷಗಳ ಸಂಸದರು ಭಾಗಿಯಾಗಿದ್ದಾರೆ.

Key words: Lok Sabha, adjourned, Opposition Party, protest, continues