Sunday, September 13, 2026

BDA Apartments

ನಮ್ಮ ಗ್ಯಾರಂಟಿ ನಿಲ್ಲಿಸಲು ವಿಪಕ್ಷದವರ ಹಣೆಯಲ್ಲೂ ಬರೆದಿಲ್ಲ- ಡಿಸಿಎಂ ಡಿ.ಕೆ...
Home Front Page ನಮ್ಮ ಗ್ಯಾರಂಟಿ ನಿಲ್ಲಿಸಲು ವಿಪಕ್ಷದವರ ಹಣೆಯಲ್ಲೂ ಬರೆದಿಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್

ನಮ್ಮ ಗ್ಯಾರಂಟಿ ನಿಲ್ಲಿಸಲು ವಿಪಕ್ಷದವರ ಹಣೆಯಲ್ಲೂ ಬರೆದಿಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ನವೆಂಬರ್‌ 11,2024 (www.justkannada.in):  ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುತ್ತಾರೆ ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರಿಗೆ ತಿರುಗೇಟು ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ಗ್ಯಾರಂಟಿ ನಿಲ್ಲಿಸಲು ವಿಪಕ್ಷದವರ ಹಣೆಯಲ್ಲೂ ಬರೆದಿಲ್ಲ ಎಂದು ಟಾಂಗ್ ಕೊಟ್ಟರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಹೀಗಾಗಿ ಜನರು ಜಾಗೃತರಾಗಿರಬೇಕು ಎಂದು ದೇವೇಗೌಡರು ಸಂದೇಶ ನೀಡಿದ್ದಾರೆ. ನಮ್ಮ ತಾಯಂದಿರ ಬದುಕು ಹಾಗೂ ಸಂಸಾರ ಉತ್ತಮವಾಗಿ ಸಾಗಲಿ ಎಂದು ನಾವು ಗೃಹಲಕ್ಷ್ಮಿ ಹಣ ನೀಡುತ್ತಿದ್ದೇವೆ. ಇದನ್ನು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಹೊರಟಿದೆ. ಜನ ಹುಷಾರಾಗಿರಬೇಕು ಎಂದು ನುಡಿದರು.

ರಾಜ್ಯದ ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ ಲೂಟಿ ಮಾಡಿ ಮಹಾರಾಷ್ಟ್ರ ಚುನಾವಣೆಗೆ ಬಳಕೆ ಎಂಬ ಪ್ರಧಾನಿ ಮೋದಿ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,  ಇದು ಸುಳ್ಳು ಆರೋಪ, ಮೋದಿ ಅವರನ್ನು ಯಾರೋ ದಾರಿತಪ್ಪಿಸಿದ್ದಾರೆ. ಈ ವಿಚಾರವಾಗಿ ಆರೋಪ ಸಾಬೀತುಪಡಿಸಿದರೆ ರಾಜಕೀಯ ತ್ಯಜಿಸುವುದಾಗಿ  ಸಿಎಂ ಬಹಿರಂಗ ಸವಾಲು ಹಾಕಿದ್ದಾರೆ. ಇದಕ್ಕಿಂತ ಬೇರೇನು ಬೇಕು? ಎಂದರು.

Key words: opposition party, stop, our guarantee, DCM, DK Shivakumar