ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ: ಬೆಂ-ಮೈ ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆಗೆ ಯತ್ನ.

ಮಂಡ್ಯ,ಆಗಸ್ಟ್,22,2023(www.justkannada.in): ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನ ವಿರೋಧಿಸಿ ಮಂಡ್ಯದಲ್ಲಿ ಸರ್ಕಾರದ ವಿರುದ್ದ ರೈತರ ಆಕ್ರೋಶ  ಹೆಚ್ಚಾಗಿದ್ದು ಇಂದು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆಗೆ ಯತ್ನಿಸಿದರು.

ಮಂಡ್ಯ ತಾಲ್ಲೂಕು ಇಂಡವಾಳು ಗ್ರಾಮದ ಬಳಿ  ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇ ತಡೆದು ರೈತರು ಪ್ರತಿಭಟನೆಗೆ ಮುಂದಾದರು. ಎತ್ತಿನಗಾಡಿ ಸಮೇತ ಹೆದ್ದಾರಿಗೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದು ಈ ವೇಳೆ ಪೊಲೀಸರು ರೈತರನ್ನ ತಡೆದರು.

ಸರ್ಕಾರ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ.ಮೊದಲು ತಮಿಳುನಾಡಿಗೆ ಬಿಡುತ್ತಿರುವ ನೀರನ್ನ ನಿಲ್ಲಿಸಬೇಕು ಎಂದು ರೈತರು ಆಗ್ರಹಿಸಿದರು. ಈ ಸಮಯದಲ್ಲಿ ರೈತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದು ರೈತರನ್ನ ಪೊಲೀಸರು ವಶಕ್ಕೆ ಪಡೆದು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸ್ಥಳಾಂತರಿಸಿದರು.

Key words: Opposition – release – Cauvery water – Tamil Nadu- Farmers – protest