Friday, July 31, 2026

BDA Apartments

Home Front Page ಭಾರಿ ಮಳೆ ಸಾಧ್ಯತೆ: ಕೊಡಗು, ಮೈಸೂರು, ಹಾಸನ ಸೇರಿ ವಿವಿಧೆಡೆ ಆರೆಂಜ್ ಅಲರ್ಟ್ ಘೋಷಣೆ

ಭಾರಿ ಮಳೆ ಸಾಧ್ಯತೆ: ಕೊಡಗು, ಮೈಸೂರು, ಹಾಸನ ಸೇರಿ ವಿವಿಧೆಡೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು, ಮೇ 14, 2021 (www.justkannada.in): ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಈ ನಿಟ್ಟಿನಲ್ಲಿ ಮೇ 16ರವರೆಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮೇ 15 ಮತ್ತು 16ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮೇ 16ರಂದು ಕರ್ನಾಟಕಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ತೌಕ್ತೆ ಚಂಡಮಾರುತ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ಮೇ 16ರಂದು ಗಂಟೆಗೆ 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.