Tuesday, September 15, 2026

BDA Apartments

ಪದವಿ ಪೂರ್ವ ಕಾಲೇಜುಗಳ 4055 ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ BDA JK_Adv BDA Adv
Home Front Page ಪದವಿ ಪೂರ್ವ ಕಾಲೇಜುಗಳ 4055 ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ

ಪದವಿ ಪೂರ್ವ ಕಾಲೇಜುಗಳ 4055 ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ

ಬೆಂಗಳೂರು, ಜೂನ್ 04, 2023 (www.justkannada.in): ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರುಗಳ ಹುದ್ದೆಗಳಿಗೆ 4055 ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶಿಸಲಾಗಿದೆ.

ಒಟ್ಟು 4055 ಹುದ್ದೆಗಳಿಗೆ ಮಾಸಿಕ ರೂ.12,000 ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಈ ಕುರಿತಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ.

ದಿನಾಂಕ 04-07-2016ರಲ್ಲಿನ ಷರತ್ತಿಗೆ ಒಳಪಟ್ಟು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಅವಧಿಗೆ ಖಾಲಿಯಿರುವ ಬೋಧಕ ಹುದ್ದೆಗಳಿಗೆ ಎದುರಾಗಿ ಒಟ್ಟು 4055 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.

ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳು ಸೇರಿ 4055 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.