ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ: ರಾಜ್ಯದಲ್ಲಿ ತೀವ್ರಗೊಂಡ ಪ್ರತಿಭಟನೆ.

ಮಂಡ್ಯ,ಸೆಪ್ಟಂಬರ್,13,2023(www.justkannada.in):  ವಾಡಿಕೆಯಂತೆ ಮಳೆಯಾಗದೇ ಕೆಆರ್ ಎಸ್ ಜಲಾಶಯ ಭರ್ತಿಯಾಗದ ಹಿನ್ನೆಲೆ  ರೈತರು ಮತ್ತು ಜನರು ಸಂಕಷ್ಟಕ್ಕೀಡಾಗಿದ್ದು ಈ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಈವರೆಗೆ ನೀರು ಬಿಟ್ಟ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ತೀವ್ರಗೊಂಡಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಸರ್ಕಾರದ ವಿರುದ್ಧ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ ವೇ ನಲ್ಲಿ ಪ್ರತಿಭಟನೆನಡೆದಿದ್ದು, ಮಹಿಳೆಯರು ಉರುಳು ಸೇವೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​, ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. . ಕಾರುಗಳ ಕೆಳಗೆ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ಮೈಸೂರು ಹೆದ್ದಾರಿಯ  ಮೈ ಕಣಮಿಣುಕಿ ಟೋಲ್ ಪ್ಲಾಜಾ ಬಳಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಕಾವೇರಿ ನಮ್ಮದು, ಕಾವೇರಿ ನೀರು ನಮ್ಮದು, ಅಯ್ಯಯ್ಯೋ ಅನ್ಯಾಯ ಅಂತ ಘೋಷಣೆಗಳನ್ನು ಕೂಗುತ್ತಾ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ಹಿರಿಯ ಹೋರಾಟಗಾರರೊಬ್ಬರು ಕೈಯಲ್ಲೊಂದು ಪಾತ್ರೆ ಹಿಡಿದು ರಸ್ತೆಯಲ್ಲಿ ಉರುಳುತ್ತಾ  ಭಿಕ್ಷೆ ಬೇಡುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು.

Key words: Order – release –water- again -Tamil Nadu- Protest – state.