ಆಸ್ಕರ್ ಫರ್ನಾಂಡಿಸ್ ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದರು-ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ.

ಬೆಂಗಳೂರು,ಸೆಪ್ಟಂಬರ್,13,2021(www.justkannada.in):  ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಆಸ್ಕರ್ ಫರ್ನಾಂಡಿಸ್ ರವರು ಸರಳ ಸಜ್ಜನಿಕೆಯ ರಾಜಕಾರಣಿ. ಅವರು ಇಂದು ನಮ್ಮನ್ನೆಲ್ಲ ಅಗಲಿರುವುದು ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲೆಂದು ಕೋರುತ್ತೇನೆ. ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಕೇಂದ್ರದ ಮಾಜಿ ಸಚಿವರು, ಕಾಂಗ್ರೆಸ್ ಹಿರಿಯ ನಾಯಕರಾದ ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಆಸ್ಕರ್ ಅವರು ಗಾಂಧಿ ತತ್ವ ಹಾಗೂ ಸರಳತೆಗೆ ಮತ್ತೊಂದು ಹೆಸರಾಗಿದ್ದವರು. ಸಾಮಾನ್ಯ ಕುಟುಂಬದಿಂದ ಬಂದ ಅವರು ಕೇಂದ್ರ ಸಚಿವರಾಗಿ ನಮಗೆ ಉತ್ತಮ ಮಾರ್ಗದರ್ಶನ ನೀಡಿ, ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದ ಧೀಮಂತ ನಾಯಕ. ಕಷ್ಟಕಾಲದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಮಾಡಿದ್ದಾರೆ, ಪಕ್ಷವನ್ನು ಮುನ್ನಡೆಸಿದ್ದಾರೆ ಎಂದು ಸ್ಮರಿಸಿದರು.

ಇನ್ನು ಕೆಪಿಸಿಸಿ ಕಚೇರಿಯಲ್ಲಿ ಆಸ್ಕರ್ ಫರ್ನಾಂಡೀಸ್ ಅವರಿಗೆ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಈ ಸಂತಾಪಸೂಚಕ ಸಭೆಯಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,  ಆಸ್ಕರ್ ಫರ್ನಾಂಡಿಸ್ ನಮಗೆ ಚಿರಪರಿಚಿತರು. ಯಾವುದೇ ಗೌಪ್ಯ ವಿಚಾರವನ್ನೂ ಸಹ ಚರ್ಚಿಸುತ್ತಿದ್ದರು. ಅವರಂತಹ ಮನುಷ್ಯ ಮತ್ತೊಬ್ಬರು ಸಿಗಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

Key words: Oscar Fernandes- simple –outfit- politician-CM Basavaraja Bommai