Monday, September 14, 2026

BDA Apartments

ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿ ಅವರ ಕೈ ಬಲಪಡಿ...
Home Front Page ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದು ನಮ್ಮ ಗುರಿ-...

ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದು ನಮ್ಮ ಗುರಿ- ಮಾಜಿ ಸಿಎಂ ಬಿಎಸ್ ವೈ.

ಬೆಂಗಳೂರು, ಜನವರಿ,5,2024(www.justkannada.in): ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿ ಅವರ ಕೈ  ಬಲಪಡಿಸುವುದು ನಮ್ಮ ಗುರಿಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ನಡೆದ ‘ಬಲವರ್ಧನೆಗಾಗಿ ಭೀಮ ಸಮಾವೇಶ’ದಲ್ಲಿ ಅವರು ಮಾತನಾಡಿದ ಮಾಜಿ ಸಿಎಂ ಬಿಎಸ್ ವೈ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳನ್ನ ಗೆದ್ದು  ಮೋದಿಜೀ ಅವರ ಕೈಯನ್ನು ಬಲಪಡಿಸಬೇಕಿದೆ. ಹೀಗಾಗಿ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ. ಬಿ.ವೈ ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಿದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಲ ತುಂಬುವಂತೆ ಮನವಿ ಮಾಡಿದರು.ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿ ಅವರ ಕೈ ಬಲಪಡಿ...

ಶಾಸಕ ಸಿಮೆಂಟ್ ಮಂಜು, ಸಂಸದ ಮುನಿಸ್ವಾಮಿ, ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಕುಡಚಿ ರಾಜೀವ್ ಮತ್ತಿತರು ಉಪಸ್ಥಿತರಿದ್ದರು.

Key words: Our aim – win -all – Lok Sabha -constituencies- Former CM- BS Yeddyurappa