17 ಶಾಸಕರ ಋಣ ತೀರಿಸುವ ಜವಾಬ್ದಾರಿ ನಮ್ಮದು- ಸಚಿವ ಕೆ.ಎಸ್ ಈಶ್ವರಪ್ಪ

ಬೆಂಗಳೂರು,ಅಕ್ಟೋಬರ್,13,2020(www.justkannada.in):  17 ಶಾಸಕರಿಂದಾಗಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ 17 ಶಾಸಕರ ಋಣ ತೀರಿಸುವ ಜವಾಬ್ದಾರಿ ನಮ್ಮದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.jk-logo-justkannada-logo

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಅಂದು 17 ಶಾಸಕರು ರಾಜೀನಾಮೆ ನೀಡದೇ ಇದ್ದಿದ್ದರೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರಲಿಲ್ಲ. ಹೀಗಾಗಿ 17 ಶಾಸಕರ ಋಣ ತೀರಿಸುವ ಜವಾಬ್ದಾರಿ ನಮ್ಮದು. ಬಿಜೆಪಿ ಪಕ್ಷ ಆ ಶಾಸಕರ ಋಣ ತೀರಿಸುವ ಕೆಲಸ ಮಾಡಲಿದೆ ಎಂದು ನುಡಿದರು.our-responsibility-17-mlas-minister-ks-eshwarappa

ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿಯಿಂದ‌ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ, ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ. ಮುನಿರತ್ನ ಅಕ್ರಮ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತ ಮಾಡುತ್ತೇವೆ. ಆರ್ ಆರ್ ನಗರ, ಶಿರಾ ಜೊತೆಗೆ ವಿಧಾನ ಪರಿಷತ್ ನ ಶಿಕ್ಷಕರು, ಪದವೀಧರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

Key words: our responsibility –17 MLAs-Minister- KS Eshwarappa.