ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಹೆಚ್ಚಾದ ಆಕ್ರೋಶ: ರಾಜ್ಯದ ಹಲವೆಡೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ….

ಬೆಂಗಳೂರು,ಸೆ,4,2019(www.justkannada.in):  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಬಂಧಿಸಿರುವ ಹಿನ್ನೆಲೆ  ರಾಜ್ಯದ ಹಲವು ಕಡೆಗಳಲ್ಲಿ ಆಕ್ರೋಶ ಹೆಚ್ಚಾಗಿದ್ದು ಕಾಂಗ್ರೆಸ್ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ಮಾಜಿ ಸಚಿವ ಡಿಕೆ ಶಿವ ಕುಮಾರ್  ಬಂಧನ ಖಂಡಿಸಿ ಬೆಂಗಳೂರು, ರಾಮನಗರ, ಕನಕಪುರ ಹಾಗೂ ದೊಡ್ಡ ಆಲಹಳ್ಳಿಯಲ್ಲಿ ಪ್ರತಿಭಟನೆ ಕಾವು ಜೋರಾಗಿದ್ದು, ಕನಕಪುರದಲ್ಲಿ ಡಿಕೆ ಶಿವಕುಮಾರ್ ಬೆಂಗಲಿಗರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸುತ್ತಿದ್ದು ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿಸುತ್ತಿದ್ದಾರೆ.

ಕೋಲಾರ, ಮಂಡ್ಯದಲ್ಲೂ ತುಮಕೂರಿನ ಹುಲಿಯೂರು ದುರ್ಗ, ಕುಣಿಗಲ್ ನಲ್ಲಿ ಕಾಂಗ್ರೆಸ್  ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ ಪ್ರಧಾನಿ ಮೋದಿ ಅಮಿತ್ ಶಾ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಬಂಧನ ಖಂಡಿಸಿ ನಿನ್ನೆ ತಡರಾತ್ರಿ  ಸುರತ್ಕಲ್ ಮಂಗಳೂರಿನಲ್ಲಿ ಮೂಡಿಬಿದರಿ ಸೇರಿದಂತೆ ಹಲವು ಕಡೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿ ಪರಾರಿಯಾಗಿದ್ದಾರೆ. ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸ್ವಗ್ರಾಮ ದೊಡ್ಡಲಾಹಳ್ಳಿಯಲ್ಲಿ ಸಂಪೂರ್ಣ ಬಂದ್ ಮಾಡಲಾಗಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದೆ.

 

Key words: Outrage -condemnation – arrest – former minister- DK Sivakumar-protest