ಆಕ್ಸಿಜನ್ , ಬೆಡ್ ಕೊರತೆಯಾದ್ರೆ ಕೂಡಲೇ ನನ್ನ ಗಮನಕ್ಕೆ ತನ್ನಿ- ಎಲ್ಲಾ ಡಿಸಿಗಳಿಗೆ ಸಿಎಂ ಬಿಎಸ್ ವೈ ಸೂಚನೆ…

ಬೆಂಗಳೂರು,ಏಪ್ರಿಲ್,24,2021(www.justkannada.in): ಆಕ್ಸಿಜನ್ ಮತ್ತು ಬೆಡ್ ಕೊರತೆಯುಂಟಾದರೇ ಕೂಡಲೇ ನನ್ನ ಅಥವಾ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದು ರಾಜ್ಯದ ಎಲ್ಲಾ ಡಿಸಿಗಳಿಗೆ  ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.jk

ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಬಿಎಸ್ ಯಡಿಯೂರಪ್ಪ  ಬೆಡ್ ಮತ್ತು ಆಕ್ಸಿಜನ್ ಕುರಿತು ಮಾಹಿತಿ ಪಡೆದರು. ಈ ವೇಳೆ ಆಕ್ಸಿಜನ್ , ಬೆಡ್ ಕೊರತೆಯಾದ್ರೆ ಕೂಡಲೇ ನನ್ನ ಅಥವಾ ಅಧಿಕಾರಿಗಳ ಗಮನಕ್ಕೆ ತನ್ನಿ. ಯಾವುದೇ ಕಾರಣಕ್ಕೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗುವುದು ಬೇಡ ಎಂದು ಸಲಹೆ ನೀಡಿದರು.

ಹಾಗೆಯೇ ತುರ್ತು ಅಗತ್ಯ ಕಂಡು ಬಂದರೇ ಅಯಾ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತನ್ನಿ. ಯಾವ ಕಾರಣಕ್ಕೂ ಆಕ್ಸಿಜನ್ , ಬೆಡ್ ಕೊರತೆಯಾಗದಂತೆ ನಿಗಾ ವಹಿಸಿ ಎಂದು ಸಿಎಂ ಬಿಎಸ್ ವೈ ಸೂಚನೆ ನೀಡಿದರು.

Key words: oxygen – bed -shortage – immediately-CM BS Yeddyurappa-  ALL DCs.