ಮೈಸೂರು, ಸೆಪ್ಟಂಬರ್,20,2025 (www.justkannada.in): ಪ್ರತಿ ವರ್ಷ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ. ಕೆ ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ. ಸೆಪ್ಟೆಂಬರ್ 22ರಂದು ಮೈಸೂರಿನ ಅರಮನೆಯ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಡಾ. ವೈ ಕೆ ಮುದ್ದುಕೃಷ್ಣ ಅವರ ಆಯ್ಕೆ ಸಲಹಾ ಸಮಿತಿ ಪಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ ಎಂದು ಅವರು ತಿಳಿಸಿದರು. ಈ ಪ್ರಶಸ್ತಿಯು ಐದು ಲಕ್ಷ ರೂಪಾಯಿ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ, ಒಳಗೊಂಡಿದೆ.
Key words: State Sangeetha Vidwan Award, P. K Venkatesh Kumar