ಪಾದರಾಯನಪುರ ಘಟನೆ: ನಾಲ್ಕೇ ಗಂಟೆಯಲ್ಲಿ 50 ಮಂದಿ ಅರೆಸ್ಟ್

ಬೆಂಗಳೂರು, ಏಪ್ರಿಲ್ 20, 2020 (www.justkannada.in): ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಈಗಾಗಲೇ 50 ಮಂದಿಯನ್ನು ಬಂಧಿಸಲಾಗಿದೆ.

ಘಟನೆ ನಡೆದ ಮೂರುನಾಲ್ಕು ಗಂಟೆಯೊಳೆಗೆ ಎಲ್ಲ ಪ್ರಮುಖ ಮುಖಂಡರನ್ನು ಬಂಧಿಸಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದ್ದು ಈಗಾಗಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಬಿಬಿಎಂಪಿ ಸಿಬ್ಬಂದಿಯ ಮೇಲೆ ಕೆಲವರು ಹಲ್ಲೆ ಮಾಡಿದ್ದು ವಿಚಾರಣೆ ನಡೆಸಲಾಗಿದೆ. ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.