ಪಹಲ್ಗಾಮ್  ಉಗ್ರರ ದಾಳಿ : ಮೃತರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಪರಿಹಾರ  ಘೋಷಿಸಿದ ಜಮ್ಮು ಕಾಶ್ಮೀರ ಸರ್ಕಾರ

ಶ್ರೀನಗರ,ಏಪ್ರಿಲ್,23,2025 (www.justkannada.in):  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ  ಜಮ್ಮು ಮತ್ತು ಕಾಶ್ಮೀರ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ  ಘೋಷಣೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಘೋಷಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ನಡೆದ ಉಗ್ರರ ದಾಳಿಯಲ್ಲಿ  25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ. ಇವರಿಗೆ ಜಮ್ಮು ಕಾಶ್ಮೀರ ಪರಿಹಾರ ಘೋಷಿಸಿದೆ.

Key words: Pahalgam, terror, attack, Rs 10 lakh, compensation, families of deceased