Saturday, September 12, 2026

BDA Apartments

ಪೈಲ್ವಾನ್ ಚಿತ್ರತಂಡದಿಂದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು BDA JK_Adv BDA Adv
Home Cinema ಪೈಲ್ವಾನ್ ಚಿತ್ರತಂಡದಿಂದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು

ಪೈಲ್ವಾನ್ ಚಿತ್ರತಂಡದಿಂದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು

ಬೆಂಗಳೂರು,ಸೆ,16,2019(www.justkannada.in): ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾವನ್ನ ಪೈರಸಿ ಮಾಡಿ ಹರಿಬಿಟ್ಟಿದ್ದಾರೆ ಎಂಬ ಆರೋಪದ ಮೇಲೆ ಪೈಲ್ವಾನ್ ಚಿತ್ರತಂಡದಿಂದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

ಪೈಲ್ವಾನ್ ಚಿತ್ರದ ನಿರ್ಮಾಪಕಿ ಸ್ವಪ್ನಕೃಷ್ಣ  ಅವರು ದೂರು ನೀಡಿದ್ದಾರೆ.  ಕಳೆದ  12 ರಂದು ಪಂಚಭಾಷೆಗಳಲ್ಲಿ ಪೈಲ್ವಾನ್ ಚಿತ್ರ ತೆರೆಕಂಡಿದೆ.  ಈ ಬಗ್ಗೆ ಮಾತನಾಡಿರುವ ಅವರು, ಪೈಲ್ವಾನ್ ಚಿತ್ರ ಬಿಡುಗಡೆಯ ದಿನವೇ ಪೈರಸಿಯಾಗಿತ್ತು. ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರ ಮೂರು ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ತೆರೆಕಂಡಿತ್ತು. ಚಿತ್ರ ಬಿಡುಗಡೆಯ ದಿನವೇ ಪೈರಸಿಯಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾವನ್ನ ಪೈರಸಿ ಮಾಡಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಇಂದು ಸೈಬರ್ ಕ್ತೈಂ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಸುಮಾರು 3500 ಕ್ಕೂ ಹೆಚ್ಚು ಲಿಂಕ್ ಗಳನ್ನ ಪೊಲೀಸರ ಬಗ್ಗೆ ತಿಳಿಸಿದ್ದೇವೆ. ದರ್ಶನ್ ಅಭಿಮಾನಿಗಳು ಸಿನಿಮಾವನ್ನ ಪೈರಸಿ ಮಾಡಿಲ್ಲ. ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ. ಯಾರೇ ಈ ರೀತಿ ಪೈರಸಿ ಮಾಡಿದ್ರು ಅದು ತಪ್ಪು. ಚಿತ್ರರಂಗದ ಬೆಳವಣಿಗೆಗೆ ಪೈರಸಿ ಅನ್ನೊದು ಮಾರಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Key words:  Pailwan-movie-  Complaint – cybercrime- police station