ಪೇಜಾವರ ಶ್ರೀಗಳ ಆರೋಗ್ಯ ಚಿಂತಾಜನಕ: ಇಂದು ಉಡುಪಿಗೆ ತೆರಳುತ್ತಿದ್ದೇನೆ-ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

0
441

ಉತ್ತರ ಕನ್ನಡ,ಡಿ,28,2019(www.justkannada.in):  ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಹೊನ್ನಾವರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಇಂದು ಸಂಜೆ ನಾನು ಉಡುಪಿಗೆ ತೆರುಳುತ್ತಿದ್ದೇನೆ ಎಂದು ಹೇಳಿದರು.

ಡಿಸೆಂಬರ್ 30 ರಂದು ಸಚಿವ ಸಂಪುಟ ಸಭೆ ಇದೆ. ಬಜೆಟ್ ಅಧಿವೇಶನ, ರಾಜ್ಯಪಾಲರ ಭಾಷಣದ ಬಗ್ಗೆ ಸ್ಪೀಕರ್ ಜತೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುತ್ತದೆ. ಸದ್ಯ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ.  ಪ್ರವಾಹದಿಂದಾಗಿ ರಾಜ್ಯದ ಹಲವು ಗ್ರಾಮಗಳಿಗೆ ಹಾನಿಯಾಗಿದೆ. ಹಾನಿಗೊಳಗಾದ ಗ್ರಾಮಗಳಿಗೆ  ಹಣ ಕೊಡಬೇಕಾಗಿರುವುದರಿಂದ  ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಮುಂದಿನ ದಿನಗಳಲ್ಲಿ ಆರ್ಥಿಕ ಪರಿಸ್ಥಿತಿ ಸರಿಯಾಗಬಹುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: pajavara Sri- health – Serious-CM BS Yeddyurappa