Saturday, September 19, 2026

BDA Apartments

ಅಶ್ಲೀಲ ವಿಡಿಯೋ ಕೇಸ್: ಫೋಟೊ, ವಿಡಿಯೋ ಅಪ್ಲೋಡ್ ಮಾಡಿದ್ದ ಪ್ರಜ್ವಲ್ ಬಂಧನ BDA JK_Adv...
Home Crime ಅಶ್ಲೀಲ ವಿಡಿಯೋ ಕೇಸ್: ಫೋಟೊ, ವಿಡಿಯೋ ಅಪ್ಲೋಡ್ ಮಾಡಿದ್ದ ಪ್ರಜ್ವಲ್ ಬಂಧನ.

ಅಶ್ಲೀಲ ವಿಡಿಯೋ ಕೇಸ್: ಫೋಟೊ, ವಿಡಿಯೋ ಅಪ್ಲೋಡ್ ಮಾಡಿದ್ದ ಪ್ರಜ್ವಲ್ ಬಂಧನ.

ಚಿಕ್ಕಮಗಳೂರು, ಮೇ, 10,2024 (www.justkannada.in): ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೊ ವಿಡಿಯೋ ಅಪ್ಲೋಡ್ ಮಾಡಿದ್ದ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಟ್ರೋಲ್ ಪೇಜ್ ಅಡ್ಮಿನ್ ಪ್ರಜ್ವಲ್ ಬಂಧಿತ ಆರೋಪಿ. ಈತ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದವನು ಎನ್ನಲಾಗಿದೆ. ಆರೋಪಿ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅಶ್ಲೀಲ ವಿಡಿಯೋ ಕೇಸ್ arrest arrest 7

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಆರೋಪಿ ಪ್ರಜ್ವಲ್  ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡಿದ್ದನು ಎನ್ನಲಾಗಿದೆ . ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Key words: Pajwal Revanna, case, arrested