ಹುಬ್ಬಳ್ಳಿಯಲ್ಲಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಪೊಲೀಸರ ವಶಕ್ಕೆ  

ಹುಬ್ಬಳ್ಳಿ,ಫೆ,15,2020(www.justkannada,iun): ಹುಬ್ಬಳ್ಳಿಯ ಕೆಎಲ್ ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.

ಹುಬ್ಬಳ್ಳಿ ಕೆಎಲ್ ಇ ಇಂಜಿನಿಯರಿಂಗ್ ಕಾಲೇಜನಲ್ಲಿ ಈ ಘಟನೆ ನಡೆದಿದೆ. ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಓದುತ್ತಿರುವ  ಜಮ್ಮುಕಾಶ್ಮೀರ ಮೂಲದ ವಿದ್ಯಾರ್ಥಿಗಳಾದ ಅಮೀರ್, ಬಾಸಿತ್, ತಾಲಿಬ್ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಆ ವಿಡಿಯೋವನ್ನ ವೈರಲ್ ಮಾಡಿದ್ದಾರೆ. ಮೂವರು ವಿದ್ಯಾರ್ಥಿಗಳು ಗರ್ವನಮೆಂಟ್ ಕೋಟಾದಲ್ಲಿ ಸೀಟು ಗಿಟ್ಟಿಸಿಕೊಂಡಿದ್ದರು.

ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೂವರು ವಿದ್ಯಾರ್ಥಿಗಳುನ್ನ ವಶಕ್ಕೆ ಪಡೆಯಲಾಗಿದ್ದು, ಈ ವೇಳೆ ಮೂವರು ವಿದ್ಯಾರ್ಥಿಗಳಿಗೆ ಹಿಂದೂಪರ ಸಂಘಟನೆ  ಕಾರ್ಯಕರ್ತರು ಥಳಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.

ಪುಲ್ವಾಮಾ ದಾಳಿಗೆ ಒಂದು ವರ್ಷದ ಸಂದರ್ಭದಲ್ಲಿ ಆ ಕರಾಳ ದಿನದಂದು ಹುತಾತ್ಮರಾದ ಯೋಧರಿಗೆ ದೇಶಾದ್ಯಂತ ಗೌರವ ಸಮರ್ಪಣೆ ಮಾಡಲಾಗಿದೆ. ಆದರೆ ನಗರದ ಗೋಕುಲ ರಸ್ತೆಯಲ್ಲಿರುವ ಕೆಎಲ್‍ಇ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ವಿಡಿಯೋವೊಂದನ್ನು ಹರಿ ಬಿಟ್ಟಿದ್ದಾರೆ.

Key words: Pakistan Zindabad- Three-Engineering –Students-arrest-hubli