Tuesday, September 22, 2026

BDA Apartments

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಶಾಕ್ ಕೊಟ್ಟ ಸರ್ಕಾರ BDA JK_Adv BDA Adv
Home Front Page ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಶಾಕ್ ಕೊಟ್ಟ ಸರ್ಕಾರ

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಶಾಕ್ ಕೊಟ್ಟ ಸರ್ಕಾರ

ಬೆಳಗಾವಿ, ಡಿಸೆಂಬರ್​ ,9,2024 (www.justkannada.in):   ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ  ಚಳಿಗಾಲದ ಅಧಿವೇಶನ ನಡೆಯುತ್ತಿರುವ ಬೆಳಗಾವಿಯ ಸುವರ್ಣಸೌಧಕ್ಕೆ ನಾಳೆ ಮುತ್ತಿಗೆ ಹಾಕಲು ನಿರ್ಧರಿಸಿದ್ದ ಹೋರಾಟಗಾರರಿಗೆ ಸರ್ಕಾರ ಶಾಕ್ ನೀಡಿದೆ.

2ಎ ಮೀಸಲಾತಿಗಾಗಿ‌ ಆಗ್ರಹಿಸಿ ಡಿಸೆಂಬರ್ 10 ರಂದು  ಸುವರ್ಣಸೌಧಕ್ಕೆ ಟ್ರ್ಯಾಕ್ಟರ್​ ಮೂಲಕ ಮುತ್ತಿಗೆ ಹಾಕಲು ಪಂಚಮಸಾಲಿ ಸಮುದಾಯ ಕರೆ ನೀಡಿತ್ತು. ಬಸವ ಜಯಮೃತ್ಯುಂಜಯಶ್ರೀಗಳ ನೇತೃತ್ವದಲ್ಲಿ 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ. ಡಿ.10ರಂದು ಸುವರ್ಣಸೌಧಕ್ಕೆ ಟ್ರ್ಯಾಕ್ಟರ್ ಮುತ್ತಿಗೆಗೆ ನಿರ್ಧರಿಸಿದ್ದರು.

ಆದರೆ ಇದೀಗ ಡಿಸೆಂಬರ್ 9, 10ರಂದು ಹೋರಾಟದ ವಾಹನ ಬೆಳಗಾವಿ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಹೋರಾಟಕ್ಕೆ ಬರುವ ಟ್ರ್ಯಾಕ್ಟರ್, ಕ್ರೂಸರ್ ವಾಹನಗಳಿಗೆ ನಿರ್ಬಂಧ ಹೇರಿ ಡಿಸಿ ಮೊಹಮ್ಮದ್ ರೋಷನ್​​ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಈ ಕುರಿತು ಮಾತನಾಡಿ ಅಸಮಾಧಾನ ವ್ಯಕ್ತಪಡಿಸಿರುವ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹೋರಾಟವನ್ನು ಹತ್ತಿಕ್ಕುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಬಾರದು. ಪಂಚಮಸಾಲಿ 2A ಮೀಸಲಾತಿಗಾಗಿ ಆಗ್ರಹಿಸಿ ನಾಳೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಆದರೆ ಹೋರಾಟದಲ್ಲಿ ಟ್ರ್ಯಾಕ್ಟರ್, ಕ್ರೂಸರ್ ವಾಹನ ನಿಷೇಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಮ್ಮ ಹೋರಾಟ ಹತ್ತಿಕ್ಕುವ ಯತ್ನ ಮಾಡಬಾರದು ಎಂದು ಕಿಡಿಕಾರಿದರು.

Key words:  government, shock, Panchamasali reservation, movement.