ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ- ಬಸವ ಜಯ ಮೃತ್ಯುಂಜಯ ಸ್ವಾಮೀಜಿ…

ಬೆಂಗಳೂರು,ಫೆಬ್ರವರಿ,21,2021(www.justkannada.in):  ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ  ಹೇಳಿದ್ದಾರೆ.jk

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿಗೆ ಮೀಸಲಾತಿ ಸಮಾವೇಶದಲ್ಲಿ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಎಚ್.ಡಿ. ‌ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಮುದಾಯಕ್ಕೆ ಮೀಸಲಾತಿ ನೀಡಿದರು. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಹಲವು ಸಮುದಾಯಗಳಿಗೆ ಮೀಸಲಾತಿ ನೀಡಿದರು. ಈ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದರು. ಈಗ ಸಿಎಂ ಬಿಎಸ್ ಯಡಿಯೂರಪ್ಪ ಸಾಮಾಜಿಕ ನ್ಯಾಯ ಒದಗಿಸಬೇಕಿದೆ ಎಂದರು.

Panchamsali community- not return –until- reservation -Basava Jaya Mritunjaya Swamiji.
ಕೃಪೆ-internet

ಪಂಚಮಸಾಲಿ ಸಮುದಾಯಕ್ಕೆ ನಿಗಮ, ಅನುದಾನ ಯಾವುದೂ ಬೇಡ.  2ಎ ಮೀಸಲಾತಿ ಮಾತ್ರ ಬೇಕು. ಮೀಸಲಾತಿ ನೀಡದಿದ್ದರೇ ವಿಧಾನಸೌಧದ  ಮುಂದೆ ಧರಣಿ ಆರಂಭಿಸುತ್ತೇವೆ. ಅದಕ್ಕೂ ಮಣಿಯದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ  ಎಂದು ಎಚ್ಚರಿಕೆ ನೀಡಿದರು.

Key words: Panchamsali community- not return –until- reservation -Basava Jaya Mritunjaya Swamiji.