ಏಕಕಾಲದಲ್ಲಿ ಎರಡು ದಾಖಲೆ ನಿರ್ಮಿಸಿದ ಜೆಡಿಎಸ್ ನ ಪಂಚರತ್ನ ಯಾತ್ರೆ.

ಬೆಂಗಳೂರು,ಡಿಸೆಂಬರ್,30,2022(www.justkannada.in): ರಾಜ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಜೆಡಿಎಸ್ ​ನ ಪಂಚರತ್ನಯಾತ್ರೆಯು ಏಕಕಾಲದಲ್ಲಿ ಎರಡು ದಾಖಲೆಗಳನ್ನು ನಿರ್ಮಿಸಿದೆ.

ಕಳೆದ ನವೆಂಬರ್ 18ರಿಂದ ರಾಜ್ಯಾದ್ಯಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ನಡೆಯುತ್ತಿದ್ದು, ಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ದಾಖಲೆ ಬರೆದಿದೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಈ ಎರಡೂ ದಾಖಲೆಗಳನ್ನು ನಾಡಿನ ಜನ ಮತ್ತು ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ.‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ತೀರ್ಪುಗಾರರಾದ ಆರ್.ಹರೀಶ್ ಅವರು ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ಹಸ್ತಾಂತರ ಮಾಡಿದರು.

Key words: Pancharatnayatra – JDS- created- two records