ಮನದಾಳದ ಮಾತುಗಳನ್ನು ಹಂಚಿಕೊಂಡ ಪ್ಯಾರಾಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತ ಭವೀನಾಬೆನ್

ಬೆಂಗಳೂರು, ಆಗಸ್ಟ್, 29, 2021 (www.justkannada.in): ಪ್ಯಾರಾಲಿಂಪಿಕ್ಸ್‌ ಬೆಳ್ಳಿ ಪದಕ ಗೆದ್ದ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

ನಾನು ಗೆದ್ದ ಈ ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ ಸಮರ್ಪಿಸುತ್ತೇನೆಂದು ಎಂದು ಟೋಕಿಯೋ ಪ್ಯಾರಾಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತ ಹೇಳಿದ್ದಾರೆ. ಗುಜರಾತ್ ನ ಭಾವಿನಾ ಪಟೇಲ್ ಇಂದು ನಡೆದ ಮಹಿಳಾ ಸಿಂಗಲ್ಸ್ ಟೇಬಲ್ ಟೆನಿಸ್ ಹಣಹಾಹಣಿಯಲ್ಲಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ನನ್ನ ತರಬೇತುದಾರರಿಗೆ, ನನಗೆ ಬೆಂಬಲ ನೀಡಿದ ನನ್ನ ಕುಟುಂಬ ಸದಸ್ಯರಿಗೆ ಹಾಗೂ ಸ್ನೇಹಿತರಿಗೆ ಧನ್ಯವಾದಗಳನ್ನು ಹೇಳಲಿಚ್ಛಿಸುತ್ತೇನೆ, ಪಂದ್ಯದ ಸಂದರ್ಭದಲ್ಲಿ ನಾನು ಸ್ವಲ್ಪ ಆತಂಕಕ್ಕೊಳಗಾಗಿದ್ದೆ. ಆಟದ ತಂತ್ರವನ್ನು ಸೂಕ್ತ ರೀತಿಯಲ್ಲಿ ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ. ಮುಂದಿನ ಬಾರಿ ಖಂಡಿತವಾಗಿಯು ಅತ್ಯುತ್ತಮ ಪ್ರದರ್ಶನ ನೀಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.