Monday, September 28, 2026

BDA Apartments

ಪ್ರೀತಿಗೆ ಹೆತ್ತವರ ವಿರೋಧ: ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು BDA JK_Adv BDA Adv
Home Crime ಪ್ರೀತಿಗೆ ಹೆತ್ತವರ ವಿರೋಧ: ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು

ಪ್ರೀತಿಗೆ ಹೆತ್ತವರ ವಿರೋಧ: ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು

ಚಿಕ್ಕಬಳ್ಳಾಪುರ,ಸೆಪ್ಟಂಬರ್,14,2024 (www.justkannada.in): ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಒಂದೇ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶಿಡ್ಲಘಟ್ಟದಲ್ಲಿ ನಡೆದಿದೆ.

ನವೀನ್ ಹಾಗೂ ವಂದನಾ  ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ವಂದನಾ ಎಸ್ ಎಸ್ ಎಲ್ ಸಿ ಓದುತ್ತಿದ್ದು, ನವೀನ್ ಚಾಲಕನಾಗಿದ್ದ ಎನ್ನಲಾಗಿದೆ. ಈ ನಡುವೆ ನವೀನ್ ಜೊತೆ ವಂದನಾಗೆ  ಪ್ರೇಮಾಂಕುರವಾಗಿತ್ತು.

ಆದರೆ ಇಬ್ಬರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಬ್ಬರು ಒಂದೇ ಹಗ್ಗದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಶಿಡ್ಲಘಟ್ಟ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Key words: Parents, opposition, love, Lovers, suicide