ಮಂಗಳೂರು,ಅ,2,2019(www.justkannada.in): ಮದುವೆಗೆ ಮನೆಯವರು ವಿರೋಧಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
ನೂತನ್ ಮತ್ತು ಅಪೂರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ನೂತನ್ ಮತ್ತು ಅಪೂರ್ವ ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದರು. ಈ ನಡುವೆ ಸೆಪ್ಟಂಬರ್ 30 ರಂದು ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ವಿವಾಹವಾಗಿದ್ದರು. ಆದರೆ ಪ್ರೀತಿಗೆ ಮನೆಯವರ ವಿರೋಧ ಹಿನ್ನೆಲೆ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಅಸ್ವಸ್ಥ ಪ್ರೇಮಿಗಳಿಬ್ಬರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನೂತನ್ ಮತ್ತು ಅಪೂರ್ವ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Key words: parents-Opposition – Marriage- Lovers – commit -suicide.






