ಮುಂಜಾಗ್ರತಾ ಕ್ರಮದೊಂದಿಗೆ ಸಂಸತ್ ಮುಂಗಾರು ಅಧಿವೇಶನ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ಜುಲೈ 12, 2020 (www.justkannada.in): ಮುಂಜಾಗ್ರತಾ ಕ್ರಮದೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆಯೊಂದಿಗೆ ಮುಂಗಾರು ಅಧಿವೇಶನ ನಡೆಯಲಿದೆ. ಮಾರ್ಚ್ ತಿಂಗಳಲ್ಲಿ ಲೋಕಸಭೆಯಲ್ಲಿ 15 ರಾಜ್ಯಸಭೆಯಲ್ಲಿ 13 ಮಸೂದೆಗಳು ಅನುಮೋದನೆಗೊಂಡಿವೆ ಎಂದರು.

ಈ ಅಧಿವೇಶನದಲ್ಲಿ ಎರಡು ಸದನಗಳಲ್ಲಿ 19 ಮಸೂದೆಗಳನ್ನು ಅನುಮೋದನೆಗೊಳಿಸಲಾಗುವುದು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮದೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.