ಸಂಸತ್ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ ಬಿಲ್ ಸೇರಿ ಮೂರು ವಿಧೇಯಕ ಮಂಡನೆ

ನವದೆಹಲಿ,ಏಪ್ರಿಲ್,16,2026 (www.justkannada.in):   ಇಂದಿನಿಂದ ಮೂರು ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯುತ್ತಿದ್ದು ಇಂದು ಕ್ಷೇತ್ರ ಮರುವಿಂಗಡಣೆ ಬಿಲ್ ಸೇರಿ ಮೂರು ವಿಧೇಯಕಗಳು ಲೋಕಸಭೆಯಲ್ಲಿ ಮಂಡನೆಯಾಗಿವೆ.

ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ, ಲೋಕಸಭೆ ಸಂವಿಧಾನ (131 ತಿದ್ದುಪಡಿ)2026 ವಿಧೇಯಕವನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್  ಮಂಡಿಸಿದರು. ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಬಿಲ್ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು.

ಮಂಡನೆಯ ವೇಳೆ ವಿರೋಧ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ದಕ್ಷಿಣ ಭಾರತದ ರಾಜ್ಯಗಳಿಗೆ ಇದರಿಂದ ಅನ್ಯಾಯವಾಗಬಹುದು ಎಂಬ ಭೀತಿಯನ್ನು ಅನೇಕ ನಾಯಕರು ವ್ಯಕ್ತಪಡಿಸಿದ್ದಾರೆ. ಮಸೂದೆಯ ಮೇಲಿನ ಚರ್ಚೆಗೆ ಸ್ಪೀಕರ್ ಅವರು ಮುಂದಿನ ದಿನಾಂಕವನ್ನು ನಿಗದಿಪಡಿಸಲಿದ್ದಾರೆ.

Key words: Parliament, Special session, Three bills