ಪಕ್ಷಕ್ಕೆ ಪ್ರಧಾನಿ ಹುದ್ಧೆ ಬಗ್ಗೆ ಆಸಕ್ತಿಯಿಲ್ಲ: ಸಂವಿಧಾನ, ಪ್ರಜಾಪ್ರಭುತ್ವದ ಕಲ್ಪನೆ ರಕ್ಷಣೆ ನಮ್ಮ ಉದ್ಧೇಶ- ಮಲ್ಲಿಕಾರ್ಜುನ ಖರ್ಗೆ.

ಬೆಂಗಳೂರು ಜುಲೈ 18,2023(www.justkannada.in): ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ಹುದ್ದೆ ಬಗ್ಗೆ ಆಸಕ್ತಿಯಿಲ್ಲ. ಆದರೆ ಭಾರತ, ಸಂವಿಧಾನ, ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವದ ಕಲ್ಪನೆಯನ್ನು ರಕ್ಷಿಸುವಲ್ಲಿ ಆಸಕ್ತಿ ಇದೆ. ಇದು ನಮ್ಮ ಉದ್ದೇಶವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

2024ರ ಲೋಕಸಭೆ ಚುನಾವಣೆಗೆ ತಯಾರಿ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ್ ಸಭೆ ಉದ್ಧೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ರಾಜ್ಯ ಮಟ್ಟದಲ್ಲಿ ನಮ್ಮ ನಡುವೆ ಕೆಲವು ಭಿನ್ನಾಭಿಪ್ರಾಯಗಳಿವೆ. ಆದರೆ ಈ ಭಿನ್ನತೆ ಅಷ್ಟು ದೊಡ್ಡದಲ್ಲ. ನಿರುದ್ಯೋಗದಿಂದ ಬಳಲುತ್ತಿರುವ ಯುವಕರು ಮತ್ತು ಬಡವರು, ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕಲು ನಾವು ನಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಭಾಗವಹಿಸುವ 26 ಪಕ್ಷಗಳು 11 ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಕಾರಣ ಸಾಕಷ್ಟು ರಾಜಕೀಯ ಬಲ ಹೊಂದಿವೆ. 2019ರಲ್ಲಿ ಬಿಜೆಪಿಗೆ 303 ಸ್ಥಾನಗಳು ಬಂದಿಲ್ಲ. ಅದು ತನ್ನ ಮಿತ್ರಪಕ್ಷಗಳ ಮತಗಳನ್ನು ಬಳಸಿಕೊಂಡು ಅಧಿಕಾರಕ್ಕೇರಿತು. ನಂತರ ಅವುಗಳನ್ನು ತಿರಸ್ಕರಿಸಿತು. ಇಂದು, ಬಿಜೆಪಿ ಅಧ್ಯಕ್ಷರು ಮತ್ತು ಅವರ ನಾಯಕರು ತಮ್ಮ ಹಳೆಯ ಮಿತ್ರರನ್ನು ಸರಿಪಡಿಸಲು ರಾಜ್ಯದಿಂದ ರಾಜ್ಯಕ್ಕೆ ಓಡುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.

Key words: party – not interested –PM- post-protect – Constitution-Mallikarjuna Kharge.