ಲೂಟಿ ಹೊಡೆದಿದ್ದಕ್ಕೆ ರಾಜ್ಯದ ಜನರು ಅವರನ್ನ ತಿರಸ್ಕರಿಸಿದ್ದಾರೆ-ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು.

ಹಾಸನ, ಫೆಬ್ರವರಿ,24,2024(www.justkannada.in):  ಲೂಟಿ ಹೊಡೆದಿದ್ದಕ್ಕೇ ಬಿಜೆಪಿ ಅವರನ್ನ ರಾಜ್ಯದ ಜನರು ವಿಧಾನಸಭೆ ಚುನಾವಣೆಯಲ್ಲಿ ತಿರಸ್ಕರಿಸಿದ್ದಾರೆ  ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಶ್ರೀಮಂತ ದೇವಾಲಯಗಳಿಗೆ ಕಾಂಗ್ರೆಸ್ ಸರ್ಕಾರ ಕನ್ನ ಹಾಕುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪ ಕುರಿತು ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಹಿಂದೂಗಳ ದೇವಸ್ಥಾನಕ್ಕೆ ಮಾತ್ರ ಬಳಸಲಾಗುತ್ತದೆ. ಬೇರೆ ಧರ್ಮದ ದೇವಾಲಯಗಳಿಗೆ ಉಪಯೋಗಿಸಲ್ಲ. ಅದಕ್ಕೆ ಈ‌ ವಿಧೇಯಕ ತಂದರೆ ವಿರೋಧಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಕೋರ್ಟ್ ನಿಂದ ಸಮನ್ಸ್ ಕುರಿತು  ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾವು ಕಾನೂನು ಹೋರಾಟ ಮಾಡುತ್ತೇವೆ. ನಮ್ಮ ಲಾಯರ್‌ ಗಳು ಸರಿಯಾದ ಉತ್ತರ ಕೊಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಿದರೆ ತಪ್ಪಲ್ಲ. ಜಾಹೀರಾತು ಕೊಟ್ಟರೆ ಮಾನನಷ್ಟ ಮೊಕದ್ದಮೆ ಆಗಲ್ಲ ಎಂದರು.

Key words: people – rejected –bjp- looting- CM Siddaramaiah