ಬಿಜೆಪಿ ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನರು ಸಂಕಲ್ಪ ಮಾಡಿದ್ದಾರೆ- ಮಾಜಿ ಸಿಎಂ ಸಿದ್ಧರಾಮಯ್ಯ.

ಹುಬ್ಬಳ್ಳಿ,ನವೆಂಬರ್,8,2022(www.justkannada.in): ಬಿಜೆಪಿ ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ ತರಲು ರಾಜ್ಯದ ಜನರು ಸಂಕಲ್ಪ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು.

ಬಿಜೆಪಿ ನಡೆಸುತ್ತಿರುವ ಜನಸಂಕಲ್ಪಯಾತ್ರೆ ಬಗ್ಗೆ ಟೀಕಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಬಿಜೆಪಿ ಕಿತ್ತೊಗೆಯಬೇಕು. ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನ ಸಂಕಲ್ಪ ಮಾಡಿದ್ದಾರೆ.  ಹೀಗಾಗಿ ಬಿಜೆಪಿಯ ಜನಸಂಕಲ್ಪಯಾತ್ರೆಗೆ ಜನ ಬರುತ್ತಿಲ್ಲ. ಬಂದವರನ್ನ ಕೂಡಿ ಹಾಕುವ ಸ್ಥತಿ ನಿರ್ಮಾಣವಾಗಿದೆ ಎಂದು ಲೇವಡಿ ಮಾಡಿದರು.

ಇನ್ನು ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಈಗಾಗಲೇ ರಣದೀಪ್ ಸುರ್ಜೇವಾಲ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.  ರಣದೀಪ್ ಸುರ್ಜೇವಾಲ ಪ್ರತಿಕ್ರಿಯೆಯೇ ನಮ್ಮ ನಿಲುವು ಎಂದರು.

Key words: People – remove- BJP – Congress – power-Former CM- Siddaramaiah.