ರಾಜ್ಯದ ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸಿ- ಸಚಿವ ಸುಧಾಕರ್ ಮನವಿ….

ಬೆಂಗಳೂರು,ಏಪ್ರಿಲ್,21,2021(www.justkannada.in):  ಕೊರೋನಾ ಚೈನ್ ಲಿಂಕ್ ಮುರಿಯಲು 14 ದಿನಗಳು ಬೇಕು. ಈಗಾಗಿ ಕೊರೋನಾ ನಿಯಂತ್ರಣಕ್ಕೆ ಬಿಗಿಕ್ರಮಕ್ಕೆ ಒತ್ತು ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.jk

ಈ ಕುರಿತು ಇಂದು ಮಾತನಾಢಿದ ಸಚಿವ ಸುಧಾಕರ್, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ನಿನ್ನೆ ರಾತ್ರಿಯೇ ಸಿಎಸ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ ರಾಜ್ಯದ ಜನರು ಕಟ್ಟು ನಿಟ್ಟಾಗಿ ನಿಯಮ ಪಾಲಿಸಬೇಕು ಎಂದು ಮನವಿ ಮಾಡಿದರು. people - state –strictly- follow –covid  rule-Appeal -Minister Sudhakar.

ಕೊರೋನಾ ಸೂಕ್ತ ಚಿಕಿತ್ಸೆ ನೀಡಲಾಗುವುದು. ಅಕ್ಸಿಜನ್, ವೆಂಟಿಲೇಟರ್, ಐಸಿಯು ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿರುವ ಕಡೆ ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ.  ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದರು.

Key words: people – state –strictly- follow –covid  rule-Appeal -Minister Sudhakar.