ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವುದು ಕಷ್ಟದ ಕೆಲಸ- ಸಿಎಂ ಸಿದ್ದರಾಮಯ್ಯ.

ಕೊಪ್ಪಳ, ಜನವರಿ,2,2024(www.justkannada.in):  ಸೇವೆ ಖಾಯಂ ಮಾಡುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪಾದಯಾತ್ರೆ ಮಾಡುವ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವುದು ಕಷ್ಟದ ಕೆಲಸ ಎಂದಿದ್ದಾರೆ.

ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತಿಥಿ ಉಪನ್ಯಾಸಕರೊಂದಿಗೆ  ಮಾತನಾಡಿದ್ದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಅವರನ್ನು ಖಾಯಂ ಮಾಡಿ ಎಂದು ಬೇಡಿಕೆ ಇದೆ. ಖಾಯಂ ಮಾಡುವುದು ಕಾನೂನಿನ ಪ್ರಕಾರ ಕಷ್ಟದ ಕೆಲಸ ಎಂದರು.

ರಾಮಮಂದಿರ ಉದ್ಘಾಟನೆಗೆ ಕೇವಲ ರಾಮಭಕ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ರಾಮಮಂದಿರದ ಮುಖ್ಯ ಅರ್ಚಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಯಾರಿಗೆ ಆಹ್ವಾನ ಹೋಗಿದೆ , ಬಿಟ್ಟಿದೆ ಎಂದು ಗೊತ್ತಿಲ್ಲ ಆಹ್ವಾನ ಕೊಟ್ಟವರು ಹೋಗುತ್ತಾರೆ, ಇಲ್ಲದವರು ಇಲ್ಲ  ಎಂದರು.

Key words: Permanent- Guest Lecturer – difficult- task- CM Siddaramaiah.