ಡಿಕೆಶಿ ರಕ್ಷಿಸಲು ತನಿಖೆಗೆ ಅನುಮತಿ ವಾಪಸ್ : ಸಿದ್ದರಾಮಯ್ಯ ಮಾಡಿದ ಕೆಲಸ ಅಕ್ಷಮ್ಯ ಅಪರಾಧ- ಮಾಜಿ ಸಿಎಂ ಬಿಎಸ್ ವೈ.

ಬೆಂಗಳೂರು, ನವೆಂಬರ್,24,2023(www.justkannada.in):  ಡಿ.ಕೆ ಶಿವಕುಮಾರ್ ರಕ್ಷಿಸಲು ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾಡಿದ ಈ ಕೆಲಸ  ಕೆಲಸ ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಬಿಎಸ್  ಯಡಿಯೂರಪ್ಪ  ಗುಡುಗಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ,  ಈ ಹಿಂದೆ ಎಜಿ ಒಪ್ಪಿಗೆ ಇಲ್ಲದೇ ಬಿಜೆಪಿಯವರು ಕಾನೂನು ಬಾಹಿರವಾಗಿ ಅನುಮತಿ ಕೊಟ್ಟಿದ್ದರು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಆದರೆ ವಾಸ್ತವ ಸ್ಥಿತಿಯಲ್ಲಿ ಇಡಿಯವರು ಸಿಬಿಐಗೆ ಕೇಸ್  ಕೊಡಿ ಎಂದು ಪತ್ರ ಬರೆದಿದ್ದರು.  ಅದ್ದರಿಂದ ನಾವು ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದವು ಎಂದು ಸ್ಪಷ್ಟನೆ ನೀಡಿದರು.

ಡಿ.ಕೆ ಶಿವಕುಮಾರ್ ಅವರನ್ನು ರಕ್ಷಣೆ ಮಾಡಲು ಸಿದ್ದರಾಮಯ್ಯ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಎಜಿ ಅಭಿಪ್ರಾಯ ಪಡೆದೇ ಸಿಬಿಐಗೆ ಪ್ರಕರಣ ಕೊಟ್ಟಿದ್ದೆವು. ಅಧಿವೇಶನದಲ್ಲಿ ದಾಖಲೆಗಳನ್ನು ಇಟ್ಟು ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: Permission – investigation – protect –DK Shivakumar-Former CM –BS Yeddyurappa