Tuesday, September 15, 2026

BDA Apartments

Home Front Page ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರಕ್ಕೆ ಅನುಮತಿ ನೀಡುವಂತೆ ಆಗ್ರಹ: ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ….

ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರಕ್ಕೆ ಅನುಮತಿ ನೀಡುವಂತೆ ಆಗ್ರಹ: ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ….

ಬೆಂಗಳೂರು,ಜೂ,6,2020(www.justkannada.in):  ಬೆಂಗಳೂರಿನ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ಇಂದು ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ರಾಜ್ಯರೈತ ಸಂಘತ ವತಿಯಿಂದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನೂರಾರು ರೈತರು ಪ್ರತಿಭಟನಾ ಸ್ಥಳಕ್ಕೆ ಜಮಾಯಿಸಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ರೈತರ ಮೇಲೆ ಬಿಬಿಎಂಪಿ ಅಧಿಕಾರಿಗಳು ದೌರ್ಜನ್ಯ ನಡೆಸಿದ್ದಾರೆ. ನಿನ್ನೆ ರಾತ್ರಿ ರೈತರನ್ನ ಕೂಡಿಹಾಕಿ ದೌರ್ಜನ್ಯ ನಡೆಸಲಾಗಿದೆ. ಪೊಲೀಸರ ಜತೆ ಸೇರಿ ಬಿಬಿಎಂಪಿ ಅಧಿಕಾರಿಗಳು ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ವ್ಯಾಪಾರಕ್ಕೆ ಮಾರ್ಕೆಟ್ ಗೆ ಬರುವ ರೈತರನ್ನ ತಡೆಯಬಾರದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. ರೈತರ ಪ್ರತಿಭಟನೆ ಹಿನ್ನೆಲೆ ಕೆ.ಆರ್ ಮಾರ್ಕೆಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Key words: permission –KR Market-Protests – state-farmer-association