Friday, September 18, 2026

BDA Apartments

Home Front Page ನನ್ನ ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಅನುಮತಿ- ಹೆಚ್.ಡಿ ದೇವೇಗೌಡರ ಶಪಥ

ನನ್ನ ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಅನುಮತಿ- ಹೆಚ್.ಡಿ ದೇವೇಗೌಡರ ಶಪಥ

ಚನ್ನಪಟ್ಟಣ,ನವೆಂಬರ್,8,2024 (www.justkannada.in) :  ಮೇಕೆದಾಟು ಯೋಜನೆ  ಪ್ರಧಾನಿ ಮೋದಿಯಿಂದ ಮಾತ್ರ ಸಾಧ್ಯ.  ನನ್ನ ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಶಪಥ ಮಾಡಿದರು.

ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಿ ಮಾತನಾಡಿದ ಹೆಚ್.ಡಿ ದೇವೇಗೌಡರು, ಮೇಕೆದಾಟು ಯೋಜನೆ ಆಗುತ್ತೆ ಎಂದರೆ ಅದು‌‌ ಪ್ರಧಾನಿ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಸಲ ಅವರು ನನ್ನ ಮನವಿ ಆಲಿಸಿದ್ದಾರೆ. ಆದರೆ, ತಮಿಳುನಾಡಿನವರು‌ ನಮ್ಮ ಕುತ್ತಿಗೆ ಹಿಡಿದಿದ್ದಾರೆ ಎಂದರು.

ನಾನು ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ. ಎಂದು ಹೆಚ್ ಡಿ ದೇವೇಗೌಡರು ತಿಳಿಸಿದರು.

ನಾನು‌ ಇಗ್ಗಲೂರು‌ ಆಣೆಕಟ್ಟು ಕಟ್ಟಿದ್ದು‌ ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು‌ ದೈವದ ಆಟ ಎಂದು ಹೆಚ್ ಡಿ ದೇವೇಗೌಡರು ನುಡಿದರು.

Key words: permission, mekedatu, project, HD Deve Gowda