ಬೆಂಗಳೂರು,ಜನವರಿ,2,2026 (www.justkannada.in): ರಾಜ್ಯದಲ್ಲಿ ಸಫಾರಿಗೆ ಮತ್ತೆ ಅನುಮತಿ ನೀಡು ವಿಚಾರಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸಭೆ ನಡೆಯಿತು.
ಮಾನವ- ವನ್ಯಜೀವಿ ಸಂಘರ್ಷದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯದ ಪ್ರಾಣಿಗಳಿಗೆ ಸಫಾರಿಯಿಂದ ತೊಂದರೆಗಳಾಗುತ್ತಿದ್ದು, ಕಾಡಿನಿಂದ ಹೊರಗೆ ಬರುತ್ತಿವೆ ಎಂಬ ದೂರುಗಳು ಬಂದಿದ್ದವು. ಈ ಕಾರಣದಿಂದ ಅರಣ್ಯ ಇಲಾಖೆಯಿಂದ ಸಫಾರಿ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು.
ಸಫಾರಿಯನ್ನು ಪುನಃ ಪ್ರಾರಂಭಿಸಲು ಒತ್ತಾಯ ಬರುತ್ತಿರುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದರು. ಸಫಾರಿ ನಿರ್ಬಂಧಿಸಿರುವ ಕಾರಣಕ್ಕೆ ಅದರ ಮೇಲೆ ಅವಲಂಬಿತರಾಗಿರುವ ಸ್ಥಳೀಯರೂ ಸಹ ಉದ್ಯೋಗದಿಂದ ವಂಚಿತರಾಗಿರುವುದಾಗಿ ತಿಳಿಸಿದರು.
ಇದನ್ನು ಆಲಿಸಿದ ಸಿಎಂ ಸಿದ್ದರಾಮಯ್ಯ, ಸಫಾರಿಗೆ ಮತ್ತೆ ಅನುಮತಿ ನೀಡುವ ಹಾಗೂ ಅರಣ್ಯ ಪ್ರವಾಸೋದ್ಯಮದಿಂದ ಮತ್ತೆ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಸೂಚಿಸಿದರು.
Key words: Permission, safari, again, CM Siddaramaiah, technical committee







