ನಟ ದರ್ಶನ್ ಸೇರಿ ಆರೋಪಿಗಳ ಜೈಲು ವರ್ಗಾವಣೆ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು,ಆಗಸ್ಟ್,23,2025 (www.justkannada.in):  ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಆರೋಪಿಗಳ ಜೈಲು ವರ್ಗಾವಣೆ ಅರ್ಜಿ ವಿಚಾರಣೆಯನ್ನ ಸೆಷನ್ಸ್ ಕೋರ್ಟ್ ಸೆಪ್ಟಂಬರ್ 9ಕ್ಕೆ  ಮುಂದೂಡಿಕೆ ಮಾಡಿದೆ.

ಜೊತೆಗೆ ಮೊದಲ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಲಾಗಿದೆ. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 9 ರವರೆಗೆ ವಿಸ್ತರಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ವರ್ಗಾಯಿಸುವಂತೆ ದರ್ಶನ್ ಹಾಗೂ ನಾಗರಾಜ್, ಲಕ್ಷ್ಮಣ್, ಪ್ರದೂಷ್, ಜಗದೀಶ್ ಸೇರಿದಂತೆ ಐವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು (ಆ.23) 64ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ, ಜೈಲು ವರ್ಗಾವಣೆಗೆ ಪ್ರದೋಷ್ ಅವರ ವಕೀಲರು ಆಕ್ಷೇಪಣೆ ಸಲ್ಲಿಸಿದರು. ಇದರ ಬಗ್ಗೆ ಪ್ರತಿಕ್ರಿಯೆ ನೀಡಲು ದರ್ಶನ್, ಪವಿತ್ರಾ ಗೌಡ ಮತ್ತು ಇತರ ಆರೋಪಿಗಳ ವಕೀಲರು ನ್ಯಾಯಾಲಯದಲ್ಲಿ ಸಮಯ ಕೋರಿದರು. ಈ ಕಾರಣಕ್ಕೆ, ಜೈಲು ವರ್ಗಾವಣೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

Key words: Hearing, jail transfer,  petition, actor Darshan, postponed, Court