Monday, November 2, 2026

Dasara Wishes

ಗ್ಯಾರಂಟಿ ಯೋಜನೆ ಬಗ್ಗೆ ನಾಲ್ಕು ಇಲಾಖೆಗಳ ಜೊತೆ ಸಿಎಂ ಸಿದ್ಧರಾಮಯ್ಯ ಪ್ರಗತಿ ...
Happy Dasara
Home Front Page ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ.

ಬೆಂಗಳೂರು,ಆಗಸ್ಟ್,30,2022(www.justkannada.in):  ಇಂದು ನಾಡಿನಾದ್ಯಂತ ಗೌರಿಗಣೇಶ ಹಬ್ಬದ ಸಂಭ್ರಮವಾಗಿದ್ದು ಈ ನಡುವೆ  ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಪ್ರಶ್ನಿಸಿ ಅಂಜುಮಾನ್ ಸಂಸ್ಥೆ  ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದು ಇಂದು  ವಿಚಾರಣೆಗೆ ಬರುವ ಸಾಧ್ಯತೆ ಇದೆ. ಈ ಮಧ್ಯೆ ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಸಂಬಂಧ ಹೈಕೋರ್ಟ್ ಸರ್ಕಾರದ ನಿರ್ಧಾರಕ್ಕೆ ಬಿಟ್ಟಿದೆ.

ಇನ್ನೊಂದೆಡೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಹಿಂದೂ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿವೆ.

Key words: Petition -filed – High Court- questioning- Ganeshotsava – Hubli- Eidgah Maidan.