ಪಿಜಿ-ಸಿಇಟಿ: ಜುಲೈ 13, 14ಕ್ಕೆ ಪರೀಕ್ಷೆ

PG-CET: Exam slated to be held on July 13, 14

 

ಬೆಂಗಳೂರು, ಮೇ.24,2024: (www.justkannada.in news ) 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂ. ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ., ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿ-ಸಿಇಟಿ) ನಡೆಯಲಿದೆ.

ಎಂ.ಇ, ಎಂ.ಟೆಕ್, ಎಂ.ಆರ್ಕಿಟೆಕ್ಟರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಜುಲೈ 13 ಹಾಗೂ ಎಂ.ಸಿ.ಎ ಮತ್ತು ಎಂ.ಬಿ.ಎ. ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಜುಲೈ 14ರಂದು ನಡೆಯಲಿದೆ.

ಮೇ 27ರಿಂದ ಜೂನ್ 17ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜೂನ್ 18ರೊಳಗೆ ಶುಲ್ಕ ಪಾವತಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಗೇಟ್ (ಜಿಎಟಿಇ) ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿ-ಸಿಇಟಿಗೆ ಹಾಜರಾಗುವ ಅಗತ್ಯವಿಲ್ಲ. ಆದರೆ, ಅಂತಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶಕ್ಕೆ ಅರ್ಹ ರಾಗಬೇಕಾಗುತ್ತದೆ. ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲೇ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತದೆ .

key words: PG-CET, Exam slated, to be held on, July 13, 14