ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಫೋನ್ ಟ್ಯಾಪಿಂಗ್ ಪ್ರಕರಣ: ಬಿ ರಿಪೋರ್ಟ್ ತಿರಸ್ಕರಿಸಿದ ಸಿಬಿಐ ವಿಶೇಷ ಕೋರ್ಟ್.

 ಬೆಂಗಳೂರು,ಅಕ್ಟೋಬರ್,18,2021(www.justkannada.in): ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಪೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ ಬಿ ರಿಪೋರ್ಟ್ ತಿರಸ್ಕರಿಸಿದ ಸಿಬಿಐ ವಿಶೇಷ ಕೋರ್ಟ್,  ಮತ್ತೆ ತನಿಖೆ ಮುಂದುವರೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಿದೆ.

ಈ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ.  ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್​ಗೆ ಮತ್ತೋರ್ವ ಎಡಿಜಿಪಿ ಭಾಸ್ಕರ್ ರಾವ್ ತಕರಾರು ಸಲ್ಲಿಸಿದ್ದರು. ಸಿಬಿಐ ಸಲ್ಲಿಸಿರುವ ಬಿ ರಿಪೋರ್ಟ್​ ಅನ್ನೇ ದೋಷಾರೋಪ ಪಟ್ಟಿಯಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಭಾಸ್ಕರ್ ರಾವ್ ಕೋರಿದ್ದರು. ಈ ಅರ್ಜಿಯನ್ನೂ ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ.

17ನೇ ಎಸಿಎಂಎಂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಈ ಸಂಬಂಧ ಸಿಬಿಐನಿಂದಲೇ ಪ್ರಕರಣದ ಮರು ತನಿಖೆ ನಡೆಯಬೇಕು ಎಂದು ನ್ಯಾಯಾಲಯ ಸೂಚಿಸಿದೆ.

Key words: Phone tapping –case- against -ADGP Alok Kumar-CBI -Special Court -rejected -B report.