ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ನ ಪೈಪ್ ಸ್ಫೋಟ: ಗಾಯಗೊಂಡಿದ್ದ ನೌಕರ ಸಾವು.

ಮೈಸೂರು,ಆಗಸ್ಟ್,8,2023(www.justkannada.in):  ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ನ ಪೈಪ್ ಸ್ಫೋಟಗೊಂಡು ಗಾಯಗೊಂಡಿದ್ದ ನೌಕರ ಅಪ್ಪಾಜಿ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಳಗಂಚಿ ಗ್ರಾಮದ ಬಳಿ ಇರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ28/07/2023ರಂದು ಸ್ಟೀಮರ್ ನ ಪೈಪ್ ಸ್ಫೋಟಗೊಂಡಿತ್ತು. ಅಪ್ಪಾಜಿ ಎನ್ನುವ ನೌಕರನಿಗೆ ತೀವ್ರತರದ ಸುಟ್ಟ ಗಾಯಗಳಾಗಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಅಪ್ಪಾಜಿಗೆ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಅಪ್ಪಾಜಿ ಇಂದು ಮೃತಪಟ್ಟಿದ್ದಾರೆ.

ಕಾರ್ಖಾನೆ ಬಾಯ್ಲರ್ ಗಳನ್ನು, ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ ಎಂದು ಕಾರ್ಮಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿಯೇ ಇದಕ್ಕೆ ಹೊಣೆ.ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿವಂತೆ ಒತ್ತಾಯ ಮಾಡಿದ್ದಾರೆ. ಈ ಕುರಿತು  ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: Pipe explosion – steamer – Bannari -Amman sugar –factory-worker dies-mysore