ನನ್ನನ್ನು ಸೋಲಿಸಲು ಬೆಂಗಳೂರು, ದೆಹಲಿಯಲ್ಲಿ ಕುಳಿತು ಪ್ಲಾನ್:  ಈ ಬಗ್ಗೆ ತಲೆಕೆಡಿಸಿಕೊಳ್ಳಲ್ಲ- ಸಿಎಂ ಬಸವರಾಜ ಬೊಮ್ಮಾಯಿ.

ಹಾವೇರಿ,ಏಪ್ರಿಲ್,7,2023(www.justkannada.in): ನನ್ನನ್ನು ಸೋಲಿಸಲು ಬೆಂಗಳೂರು, ದೆಹಲಿಯಲ್ಲಿ ಕುಳಿತು ಪ್ಲಾನ್ ಮಾಡಿದ್ದಾರೆ. ಆದರೆ  ಈ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಾನು ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ.  ನನ್ನನ್ನು ಸೋಲಿಸಲು ಏನೇನೋ ಅಪಪ್ರಚಾರ ಮಾಡಿದ್ದಾರೆ. ಬೆಂಗಳೂರು ದೆಹಲಿಯಲ್ಲಿ ಕುಳಿತು ಪ್ಲಾನ್ ಮಾಡಿದ್ದಾರೆ.  ಅವರ ಯಾವುದೇ ಪ್ಲಾನ್ ಗಳಿಗೆ ತಲೆ ಕೆಡಿಸಿಕೊಂಡಿಲ್ಲ ಎಂದರು.

ರಾಜ್ಯದಲ್ಲಿ ಬೇರೆ ಬೇರೆ ಕ್ಷೇತ್ರಗಳಿಂದ ಸ್ಪರ್ಧೆಗೆ ನನಗೆ ಆಹ್ವಾನ ಬರುತ್ತಿದೆ.  ಆದರೆ ಪ್ರೀತಿ, ವಿಶ್ವಾಸ, ದುಡಿಮೆ ಇರುವ ಕಡೆ ನನ್ನ ಸ್ಪರ್ಧೆ ಇರುತ್ತದೆ. ಶಿಗ್ಗಾಂವಿ ಕ್ಷೇತ್ರದಲ್ಲೇ ನಾನು ಪರೀಕ್ಷೆಗೆ ಇಳಿಯುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: Plan-  defeat- me- CM -Basavaraja Bommai.