ಪರಿಹಾರ ಕೊಡಿ ಕುರ್ಚಿ ಬಿಡಿ ಎಂಬ ನಾಟಕ ಹಾಸ್ಯಾಸ್ಪದ ಮಾತ್ರವಲ್ಲ ರೈತರಿಗೆ ಬಗೆಯುತ್ತಿರುವ ದ್ರೋಹ-ಸಿಎಂ ಸಿದ್ದರಾಮಯ್ಯ ವಾಗ್ದಾಳಿ.

ಬೆಂಗಳೂರು,ಜನವರಿ,29,2024(www.justkannada.in): ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಾಗದ ರಾಜ್ಯದ ಪುಕ್ಕಲು ಬಿಜೆಪಿ ನಾಯಕರು ನಮ್ಮ ವಿರುದ್ಧ ‘‘ಪರಿಹಾರ ಕೊಡಿ ಕುರ್ಚಿ ಬಿಡಿ’’ ಎಂಬ ನಾಟಕ ಪ್ರದರ್ಶನಕ್ಕೆ ಹೊರಟಿರುವುದು ಹಾಸ್ಯಾಸ್ಪದ ಮಾತ್ರವಲ್ಲ ನಾಡಿನ ರೈತರಿಗೆ ಬಗೆಯುತ್ತಿರುವ ದ್ರೋಹವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದಾಗ ಬೀಜ-ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದ ಪಕ್ಷ ಬಿಜೆಪಿ,   ಪರಿಹಾರ ಕೊಡಿ ಎಂದು ಕೇಳಿದಾಗೆಲ್ಲ ನಾವೇನು ನೋಟ್ ಪ್ರಿಂಟಿಂಗ್ ಮೆಷಿನ್ ಇಟ್ಟು ಕೊಂಡಿದ್ದೆವೆಯೇ ಎಂದು ಧಾಷ್ಟ್ಯದಿಂದ ಕೇಳಿದ್ದು ಇದೇ ಬಿಜೆಪಿ ಮುಖ್ಯಮಂತ್ರಿಗಳು. ದೆಹಲಿಯಲ್ಲಿ ಧರಣಿ ನಡೆಸುತ್ತಿದ್ದ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಕೂಡಾ ಇದೇ ಬಿಜೆಪಿ. ಇಂತಹ  ಹುಟ್ಟು ರೈತ ವಿರೋಧಿ ಬಿಜೆಪಿ ನಾಯಕರು ಈಗ ವೇಷ ಬದಲಿಸಿ ಸುರಿಸುವ ಕಣ್ಣೀರು ಮೊಸಳೆಯದ್ದು ಎಂದು ಅರ್ಥಮಾಡಿಕೊಳ್ಳದಷ್ಟು ರೈತರು ದಡ್ಡರಲ್ಲ.

ಬರಗಾಲದ ಸೂಚನೆ ಸಿಗುತ್ತಿದ್ದಂತೆಯೇ ನಮ್ಮ ಸರ್ಕಾರ ಯುದ್ಧೋಪಾದಿಯಲ್ಲಿ ಸಮೀಕ್ಷೆ ಮತ್ತು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಸಮೀಕ್ಷೆಯ ನಂತರ ಕಳೆದ ವರ್ಷದ ಸೆಪ್ಟೆಂಬರ್ 13ರಂದು ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. ನಮ್ಮ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ರೂ.37 ಸಾವಿರ ಕೋಟಿಗಳಷ್ಟು ನಷ್ಟ ಉಂಟಾಗಿದೆ. ಇದರಲ್ಲಿ   18,177 ಕೋಟಿ ರೂಪಾಯಿ ಪರಿಹಾರವನ್ನು ನೀಡುವಂತೆ ಸೆ.23ಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಅಕ್ಟೋಬರ್‌ನಲ್ಲಿ ಬರ ಅಧ್ಯಯನಕ್ಕಾಗಿ ಕೇಂದ್ರದಿಂದ ತಜ್ಞರ ತಂಡ ಆಗಮಿಸಿತ್ತು. ಇಲ್ಲಿಯವರಗೆ ಅದು ನೀಡಿರುವ ವರದಿಯ ಗತಿ ಏನಾಗಿದೆಯೋ ಗೊತ್ತಿಲ್ಲ ಎಂದು ಕೇಂದ್ರದ ನಡೆ ಟೀಕಿಸಿದರು.

ಕಂದಾಯ ಸಚಿವ ಕೃಷ್ಣಭೈರೇಗೌಡರ ಜೊತೆ ನಾನು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಕೃಷಿ ಸಚಿವರು ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಇಲ್ಲಿಯವರೆಗೆ ಬರ ಪರಿಹಾರ ಕೋರಿ 17 ಪತ್ರಗಳನ್ನು ಬರೆದಿದ್ದೇವೆ. ಯಾವುದಕ್ಕೂ ಉತ್ತರವೂ ಇಲ್ಲ, ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ. ಪರಿಸ್ಥಿತಿ ಹೀಗಿರುವಾಗ ಬಿಜೆಪಿ ನಾಯಕರು ಯಾವ ಮುಖ ಹೊತ್ತು ಬರಪೀಡಿತ ರೈತರ ಬಳಿ ನಮ್ಮ ವಿರುದ್ಧ ದೂರು ತೆಗೆದುಕೊಂಡು ಹೋಗುತ್ತಾರೆ. ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದಿಂದ ಈಗಾಗಲೇ ರಾಜ್ಯದ ರೈತರು ರೊಚ್ಚಿಗೆದ್ದಿದ್ದಾರೆ. ಆದ್ದರಿಂದ ಅವರ ಬಳಿ ಹೋಗುವಾಗ ಜಾಗ್ರತೆಯಿಂದ ಇರಿ ಎಂದಷ್ಟೇ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಪರಿಹಾರ ನೀಡದೆ ಇದ್ದರೂ ರಾಜ್ಯ ಸರ್ಕಾರ ಕೈಕಟ್ಟಿ ಕೂತಿಲ್ಲ. ಬರಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 870 ಕೋಟಿ ರೂಪಾಯಿಗಳಿದೆ. ಬರಪೀಡಿತ 36 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುತಿದ್ದೇವೆ. 21 ಜಿಲ್ಲೆಗಳಲ್ಲಿ ಟ್ಯಾಂಕರ್ ನಲ್ಲಿ ನೀರು ಪೂರೈಸಲು ಟೆಂಡರ್ ಕರೆದಿದ್ದೇವೆ. 158 ಕಡೆಗಳಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ತೋಡಲಾಗಿದೆ. ಖಾಸಗಿ ಜಮೀನು ಇರುವ 3,000 ಕಡೆಗಳಲ್ಲಿ ಕೊಳವೆ ಬಾವಿಗಳನ್ನು ತೋಡಲು ಸ್ಥಳಗಳನ್ನು ಗುರುತಿಸಲಾಗಿದೆ. ಸದ್ಯ ಎಲ್ಲಿಯೂ ಕುಡಿಯುವ ನೀರಿನ ಕೊರತೆ ಇಲ್ಲ.

ಬಿತ್ತನೆ ಬೀಜದ ಆರುವರೆ ಲಕ್ಷ ಕಿಟ್ ಗಳನ್ನು ವಿತರಿಸಿದ್ದೇವೆ. 16 ಜಿಲ್ಲೆಗಳಲ್ಲಿ ಮೇವು ಖರೀದಿಗೆ ಟೆಂಡರ್ ಕರೆದಿದ್ದೇವೆ. ಸ್ಥಳೀಯ ಶಾಸಕರ ನೇತೃತ್ವದಲ್ಲಿ ತಾಲೂಕು ಮಟ್ಟದ ಕಾರ್ಯಾಚರಣೆ ಪಡೆಯನ್ನು ರಚಿಸಲಾಗಿದೆ. ಈ ಪಡೆಗಳು ಇಲ್ಲಿಯ ವರೆಗೆ 350ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 210 ಸಭೆಗಳನ್ನು ನಡೆಸಿದೆ.

ಜನವರಿ 25ರವರೆಗೆ ಬರಪೀಡಿತ ಪ್ರದೇಶದ 29 ಲಕ್ಷ ರೈತರಿಗೆ 545 ಕೋಟಿ ರೂ. ಪರಿಹಾರ ನೀಡಲಾಗಿದೆ. ರೈತರ ಬೆಳೆಹಾನಿ ಸಮೀಕ್ಷೆಯ ನಂತರ ಇನ್ನೂ 8-9 ಲಕ್ಷ ರೈತರಿಗೆ ಪರಿಹಾರ ನೀಡಲಾಗಿದೆ. ಬೆಳೆ ಹಾನಿ ಸಮೀಕ್ಷೆಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದೆ. ಈ ದಾಖಲೀಕರಣದಲ್ಲಿ ಎದುರಾಗಿರುವ ತೊಡಕುಗಳನ್ನು ಸರಿಪಡಿಸಲಾಗಿದೆ. ಬರಪೀಡಿತ ಪ್ರದೇಶದಲ್ಲಿ ನಮ್ಮ ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಶಕ್ತಿಮೀರಿ ಪ್ರಯತ್ನ ಮಾಡುತ್ತಿದೆ. ಆದರೆ ಕೇಂದ್ರ ಸರ್ಕಾರ ಜಿದ್ದಿಗೆ ಬಿದ್ದವರಂತೆ ಪೈಸೆ ಪರಿಹಾರವನ್ನು ನೀಡದೆ ಅನ್ಯಾಯ ಮಾಡುತ್ತಿದೆ. ಈ ವೈಫಲ್ಯವನ್ನು ಮುಚ್ಚಿಹಾಕಲು ರಾಜ್ಯದ ಬಿಜೆಪಿ ನಾಯಕರು ನಮ್ಮ ಸರ್ಕಾರದ ವಿರುದ್ಧ ಹೋರಾಟದ ನಾಟಕ ಮಾಡುತ್ತಿದ್ದಾರೆ ಎಂದು ಚಾಟಿ ಬೀಸಿದರು.

ರಾಜ್ಯದ ಬಿಜೆಪಿ ನಾಯಕರಿಗೆ ಕರ್ನಾಟಕದ ನೆಲದ ಮಣ್ಣು ಮತ್ತು ನೀರಿನ ಋಣ ಇದ್ದರೆ ದೆಹಲಿಗೆ ಹೋಗಿ ಕನ್ನಡಿಗರ ಬಗ್ಗೆ ಯಾಕಿಷ್ಟು ನಿಮಗೆ ದ್ವೇಷ? ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಬೇಕು. ಪರಿಹಾರಕ್ಕಾಗಿ ಒತ್ತಾಯಿಸಿ ಪ್ರಧಾನಿ ಕಾರ್ಯಾಲಯದ ಮುಂದೆ ಧರಣಿ ಕೂರಬೇಕು. ಇವರ ಆಟಾಟೋಪಗಳೇನಿದ್ದರೂ ರಾಜ್ಯದಲ್ಲಿ ಮಾತ್ರ, ಇಲ್ಲಿ ಎಲ್ಲರು ಹುಲಿ-ಸಿಂಹಗಳೇ, ಪ್ರಧಾನಮಂತ್ರಿ, ಗೃಹಸಚಿವರನ್ನು ಕಂಡಕೂಡಲೇ ಬಾಲ ಮುದುರಿದ ಇಲಿಗಳಾಗುತ್ತಾರೆ.

ಬರಪರಿಹಾರದಲ್ಲಿ ಅನ್ಯಾಯ, ತೆರಿಗೆ ಪಾಲಿನಲ್ಲಿ ವಂಚನೆ, ಹಣಕಾಸು ಆಯೋಗದ ಅನುದಾನದಲ್ಲಿ ಮೋಸ, ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣ ನೀಡದೆ ಅನ್ಯಾಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಒಂದೇ ಎರಡೇ? ಹೀಗಿದ್ದರೂ ರಾಜ್ಯದ 25 ಬಿಜೆಪಿ ಲೋಕಸಭಾ ಸದಸ್ಯರು ಬಾಯಿಗೆ ಬೀಗ ಹಾಕಿ ಕೂತಿದ್ದಾರೆ. ಇವರೆಲ್ಲ ಯಾವ ಮುಖ ಹೊತ್ತು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ ಕೇಳಲು ಜನರ ಬಳಿ ಹೋಗುತ್ತಾರೆ? ಇಂತಹವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯೇ ತಕ್ಕ ಪಾಠ ಕಲಿಸುತ್ತಾರೆ. ರೈತರಿಗೆ ದ್ರೋಹ ಬಗೆದರೆ ಯಾವ ಶ್ರೀರಾಮಚಂದ್ರನೂ ಕಾಪಾಡಲಾರ ತಿಳಿದಿರಲಿ ಎಂದು ಬಿಜೆಪಿ ವಿರುದ್ದ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

Key words:  play -‘compensation – leave – chair’  – farmers –BJP- CM -Siddaramaiah

ENGLISH SUMMARY…

The farmers in the drought-affected areas of the state, who are entitled to compensation, have been suffering for the past five months without receiving any relief funds from the Union Government. The toothless BJP leaders of the state, who cannot question Prime Minister Narendra Modi, are planning a protest against the State Government. This is not only ridiculous but also a betrayal to the farmers of the state.

When the BJP came to power for the first time in the state, it shot and killed farmers who were merely asking for seeds and fertilizers. Whenever asked for compensation, the same BJP Chief Ministers arrogantly retorted, “Do we have a note printing machine?” This is the same BJP that has been violent towards the farmers protesting in Delhi. Such inherently anti-farmer BJP leaders are now shedding crocodile tears, but the farmers are not foolish enough to be deceived by this change of facade.

As soon as signs of drought were observed, our government was actively engaged in assessment and relief efforts on a war footing. Following the assessment, 223 taluks in the state were declared drought-affected on September 13 last year. According to our studies, the drought has caused a loss of about 37,000 crores. On September 23, we had petitioned the central government to provide compensation of 18,177 crores. In October, a team of experts from the center arrived for a drought study. The status of their report is unknown.

I met Prime Minister Narendra Modi along with Revenue Minister Krishna Byre Gowda to appeal for assistance. The Agriculture Minister had also met the Union Agriculture Minister to make an appeal. So far, we have written 17 letters requesting drought relief, but we have received neither a response nor any financial assistance. In such circumstances, with what face do the BJP leaders go to the drought-affected farmers to protest against us? The state’s farmers are already enraged by the injustice being done by the union government.

Even though the union government has not provided relief, the state government has not been sitting idle. There are Rs 870 crore in the accounts of district commissioners for drought relief. We are supplying drinking water to 36 drought-affected villages through tankers. Tenders have been called to supply water by tankers in 21 districts. New borewells have been drilled in 158 locations. Sites have been identified for drilling borewells in 3000 locations on private lands. Currently, there is no shortage of drinking water anywhere.

We have distributed 6.5 lakh seed kits. Tenders have been called for fodder purchase in 16 districts. Task forces have been formed at the taluk level under the leadership of local legislators. These forces have conducted more than 350 meetings so far. The District Disaster Management Authority, led by district officers, has conducted 210 meetings.

Until January 25, relief of 545 crore rupees has been provided to 29 lakh farmers in the drought-affected areas. After the crop loss survey, relief has been extended to another 8-9 lakh farmers. The crop loss survey has been recorded in the FRUITS software, and the issues encountered in this documentation have been resolved. The state government is making extensive efforts to assist our farmers in the drought-affected areas. However, the union government, stubbornly, is not providing the financial relief, causing injustice. To cover up this failure, the state’s BJP leaders are staging a protest against our government.

If the BJP leaders of the state owe anything to our land and soil, they should go to Delhi and ask Prime Minister Narendra Modi for justice. They should protest in front of the Prime Minister’s office demanding relief. BJP leaders bark here in Karnataka, but they turn into tailless mice in front of Home Minister and Prime Minister.

Union BJP Government has been doing injustice towards Kannadigas. It is not just with respect to the flood relief, they have done injustice even with respect to devolution of funds, funds for infrastructure and more. Despite this, the 25 BJP Lok Sabha members from the state have remained silent. With what face will these BJP leaders go to the public to ask for votes in the next Lok Sabha elections? The people of the state will teach these individuals a fitting lesson in the next Lok Sabha elections. Let it be known that if they betray the farmers, not even Lord Rama can save them.