ನವದೆಹಲಿ,ಮೇ,7,2025 (www.justkannada.in): ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿ ಉಗ್ರರ 9 ನೆಲೆಗಳನ್ನು ಧ್ವಂಸ ಮಾಡಿದ್ದು ಈ ಹಿನ್ನೆಲೆಯಲ್ಲಿ ಇದೀಗ ಪ್ರಧಾನಿ ಮೋದಿ ಯುರೋಪ್ ಪ್ರವಾಸ ರದ್ದುಗೊಳಿಸಿದ್ದಾರೆ.
ಹೌದು, ಪ್ರಧಾನಿ ನರೇಂದ್ರ ಮೋದಿ ಅವರ ನಾರ್ವೆ, ಕ್ರೊಯೇಷಿಯಾ ಮತ್ತು ನೆದರ್ಲ್ಯಾಂಡ್ಸ್ ಭೇಟಿ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮೂಲಕ ಉಗ್ರರನ್ನು ಭಾರತೀಯ ಸೇನೆ ಸದೆಬಡಿದೆ. ಸುಮಾರು 100 ಕ್ಕೂ ಹೆಚ್ಚು ಉಗ್ರರು ಫಿನೀಶ್ ಆಗಿದ್ದಾರೆ.
ಭಾರತೀಯ ಸೇನೆಯ ಕಾರ್ಯಚರಣೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Key words: Operation Sindoor, PM Modi, cancels, Europe trip