Tuesday, September 22, 2026

BDA Apartments

Home Front Page ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಟೀಕೆ. 

ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಟೀಕೆ. 

ಬೆಂಗಳೂರು,ಜನವರಿ,19,2024(www.justkannada.in): ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡುವ ವಿಚಾರಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಟೀಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,   ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಸ್ವಾಗತ. ನಮಗಿನ್ನೂ ಜಿಎಸ್ ಪಡಿ ಪರಿಹಾರ ಹಣ ಬಿಡುಗಡೆ ಮಾಡಿಲ್ಲ.  ನಮ್ಮ ರಾಜ್ಯಕ್ಕೆ  ಕೊಡಬೇಕಾದ ಹಣ ಕೊಟ್ರೆ ಇನ್ನೂ ಹೊಗಳಬಹುದು ಎಂದು ಲೇವಡಿ ಮಾಡಿದರು.ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ parameshwar

ರಾಜ್ಯಕ್ಕೆ ಬರಪರಿಹಾರ ವಿಶೇಷ ಅನುದಾನ ಕೊಟ್ಟಿಲ್ಲ. ರಾಜ್ಯದಲ್ಲಿ ಬರದಿಂದ 36 ಸಾವಿರ ಕೋಟಿ ರೂ. ನಷ್ಟವಾಗಿದೆ  17 ಸಾವಿರ ಕೋಟಿ ರೂ. ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ  ನಮಗ ಇನ್ನೂ ಪರಿಹಾರ ನೀಡಿಲ್ಲ  ಎಂದು ಪರಮೇಶ್ವರ್ ಕಿಡಿಕಾರಿದರು.

Key words: PM Modi- arrival – Bangalore- Home Minister- Dr. G. Parameshwar