Saturday, August 22, 2026

BDA Apartments

Home Front Page ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಸಿಎಂ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ ಸ್ವಾಗತ

ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಸಿಎಂ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ ಸ್ವಾಗತ

ಬೆಂಗಳೂರು,ಜೂನ್,20,2022(www.justkannada.in): ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಯಲಹಂಕ ವಾಯುನೆಲೆಗೆ ಬಂದಿಳಿದಿದ್ದಾರೆ.

ಐಎಎಫ್ ನ ವಿಶೇಷ ವಿಮಾನದಲ್ಲಿ ಯಲಹಂಕ ಏರ್ ಬೇಸ್ ಗೆ ಬಂದಿಳಿದ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.

ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ ನಂತರ ಸಂಜೆ ಮೈಸೂರಿಗೆ ಪ್ರಯಾಣಿಸಿ ಚಾಮುಂಡಿ ಬೆಟ್ಟ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಮೈಸೂರಿನಲ್ಲೇ ವಾಸ್ತವ್ಯ ಹೂಡಿ ನಂತರ ಬೆಳಿಗ್ಗೆ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Key words: PM-Modi-Arrivel- Bengaluru-CM Bommai- Governor Thawar Chand Gehlot